October 5, 2024

ಸೋಮವಾರ ಮುಂಬೈಯಲ್ಲಿ ಬೃಹತ್ ಹೋರ್ಡಿಂಗ್(ಜಾಹಿರಾತು ಫಲಕ) ಕುಸಿದ   ಪರಿಣಾಮ ಅದರಡಿಗೆ ಸಿಕ್ಕಿ 14 ಮಂದಿ ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಹೋರ್ಡಿಂಗ್ ಅಡಿ ಸಿಕ್ಕಿಬಿದ್ದವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ  ರಕ್ಷಣಾ ಕಾರ್ಯಾಚರಣೆ  ನಡೆಸುತ್ತಿದೆ. ಘಟನೆಯಲ್ಲಿ ಕನಿಷ್ಠ 74 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬೈನ ಘಾಟ್‌ಕೋಪರ್‌ನಲ್ಲಿ ಸೋಮವಾರ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆ ಗಾಳಿಯಿಂದಾಗಿ 70 ಮೀಟರ್ ಎತ್ತರದ ಜಾಹೀರಾತು ಫಲಕ ಕುಸಿದಿದೆ. ಘಾಟ್‌ಕೋಪರ್‌ನ ಚೆಡ್ಡಾನಗರ ಜಂಕ್ಷನ್‌ನಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಜಾಹಿರಾತು ಫಲಕ ನೆಲಕ್ಕುರುಳಿದೆ. ಸೋಮವಾರ ಸಂಜೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, 64 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ 20ರಿಂದ 30 ಜನರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಆದರೆ ಪೆಟ್ರೋಲ್ ಪಂಪ್‌ ಮೇಲೆ ಹೋರ್ಡಿಂಗ್ ಕುಸಿತದಿಂದಾಗಿ ಅವಶೇಷಗಳನ್ನು ತೆಗೆದುಹಾಕುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಮೃತರ ಕುಟುಂಬಗಳಿಗೆ ರೂ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದಾಗಿ ಘೋಷಿಸಿದರು. ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೀವಹಾನಿಗೆ ಸಂತಾಪ ಸೂಚಿಸಿರುವ ರಾಷ್ಟ್ರಪತಿ ಮುರ್ಮು, “ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಹಲವಾರು ಸಾವುನೋವುಗಳ ಸುದ್ದಿ ಅತ್ಯಂತ ದುಃಖಕರವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಗಾಯಗೊಂಡವರ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಯಶಸ್ಸಿಗೆ ಹಾರೈಸುತ್ತೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ