October 5, 2024

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ  ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ – HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಮುಗಿಯುತ್ತಾ ಬಂದಿದೆ.

ಗಡುವು ಮುಗಿಯುತ್ತಾ ಬರುತ್ತಿದ್ದರೂ 2 ಕೋಟಿ ವಾಹನಗಳ ಪೈಕಿ ಈವರೆಗೆ ನೋಂದಣಿ ಮಾಡಿಸಿರುವುದು 35 ಲಕ್ಷ ಮಂದಿ ಮಾತ್ರ ಎನ್ನಲಾಗಿದೆ.  

ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಈಗ ಮೇ 31ರವರೆಗೆ ವಿಸ್ತರಣೆ ಮಾಡಿ ಈಗಾಗಲೇ ಆದೇಶಿಸಿದೆ.   ಇನ್ನು ಕೆಲವೇ ದಿನ ಮಾತ್ರ ಬಾಕಿ ಇದೆ. ಆದರೆ, ರಾಜ್ಯದ ವಾಹನ ಸವಾರರು ಈ ಬಗ್ಗೆ ಆಸಕ್ತಿ ತೋರಿದಂತೆ ಕಾಣುತ್ತಿಲ್ಲ. ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಸಲ ಗಡುವು ವಿಸ್ತರಣೆಯಾಗಿದ್ದಾಗ ಕೊನೇ ಹಂತದಲ್ಲಿ 18 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದರು. ಈಗ ಅದರ ಪ್ರಮಾಣ 35 ಲಕ್ಷಕ್ಕೇರಿದೆ. ಆದರೆ, ನೋಂದಾಯಿತ ವಾಹನಗಳು ಬರೋಬ್ಬರಿ 2 ಕೋಟಿಗೂ ಅಧಿಕ ಇದೆ. ಹೀಗಾಗಿ ಈ ಬಾರಿ ರಾಜ್ಯ ಸರ್ಕಾರ ಯಾವ ಕ್ರಮವನ್ನು ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸಾವಿರ ರೂಪಾಯಿವರೆಗೂ ದಂಡ

ಒಂದು ವೇಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡದೇ ಇದ್ದರೆ ದಂಡ ಬೀಳುವುದು ಗ್ಯಾರಂಟಿ. ಮೇ 31ರೊಳಗೆ ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

ಏನಿದು ಎಚ್ಎಸ್ಆರ್ಪಿ ನಂಬರ್ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್‌ಎಸ್‌ಆರ್‌ಪಿಯನ್ನು ಕಡ್ಡಾಯಗೊಳಿಸಿರುವ ಪ್ರಮುಖ ಕಾರಣವೆಂದರೆ ಹಳೆಯ ನಂಬರ್ ಪ್ಲೇಟ್‌ಗಳನ್ನು ಟೆಂಪರ್ ಮಾಡಲು ತುಂಬಾ ಸುಲಭ ಮತ್ತು ಕಾರು ಕಳ್ಳರು ದುರುಪಯೋಗಪಡಿಸಿಕೊಳ್ಳಬಹುದು. ಆದಾಗ್ಯೂ, ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳು ತೆಗೆಯಲಾಗದ ಸ್ನ್ಯಾಪ್-ಆನ್ ಲಾಕ್‌ನೊಂದಿಗೆ ಬರುತ್ತವೆ ಮತ್ತು ಅದನ್ನು ಬದಲಾಯಿಸಲು ಕಷ್ಟವಾಗುತ್ತದೆ.

HSRP ಗಳು ಕೇಂದ್ರೀಕೃತ ಡೇಟಾಬೇಸ್‌ನಲ್ಲಿ ಎಂಜಿನ್ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಯಂತಹ ವಿವರಗಳನ್ನು ಒಳಗೊಂಡಿದೆ. ಕದ್ದ ಕಾರನ್ನು ಗುರುತಿಸಲು ಡೇಟಾ ಸಹಾಯ ಮಾಡುತ್ತದೆ. 10 ಅಂಕಿಗಳ ಪಿನ್ ಜೊತೆಗೆ ಸಂಗ್ರಹಿಸಿದ ಡೇಟಾವು ಕದ್ದ ಕಾರನ್ನು ಗುರುತಿಸಲು ಸಹಾಯ ಮಾಡುತ್ತದೆ. ವಾಹನ ಮಾಲೀಕರು ಎಂಜಿನ್ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಯಂತಹ ಅಗತ್ಯ ವಿವರಗಳನ್ನು ರವಾನಿಸಿದ ನಂತರ ಮಾತ್ರ HSRP ಪ್ಲೇಟ್‌ಗಳನ್ನು ನೀಡಲಾಗುತ್ತದೆ.

ಎಚ್ಎಸ್ಆರ್ಪಿ ಪಡೆಯುವುದು ಹೇಗೆ?

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದಾರೆ.   ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

  1. ಕರ್ನಾಟಕ ಸಾರಿಗೆ ಇಲಾಖೆವೆಬ್ಸೈಟ್  ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್ಸೈಟ್ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ