October 5, 2024

ದೇಶದಲ್ಲಿ ಅತಿದೊಡ್ಡ ಸೆಕ್ಸ್ ಸ್ಕ್ಯಾಂಡಲ್ ಹಾಸನದಲ್ಲಿ ನಡೆದಿರುವುದು ನಾಚಿಗೇಡಿನ ಸಂಗತಿ. ಬೇಟಿ ಬಚಾವೋ ಎಂದು ಕೂಗಾಡುವ ಮೋದಿ ಅವರು ಈಗ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧ  ತುಟಿ ಬಿಚ್ಚುತ್ತಿಲ್ಲ ಎಂದು ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಚಂದ್ರು ಅಂಗಡಿ ಹೇಳಿದರು.

ಅವರು ಶುಕ್ರವಾರ ಎಸ್‌ಡಿಪಿಐ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಹಾಸನದಲ್ಲಿ  ಮೋದಿಯ ಪರಮಾಪ್ತ ಪಕ್ಷದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ನೀಚ ಕೃತ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿರುವ ವಿಚಾರ ಜಗತ್ ಜಾಹಿರಾಗಿದೆ. ಇಲ್ಲಿನ ಪ್ರಕರಣಗಳ ಸಂಖ್ಯೆ ಗಮನಿಸಿದರೆ ಇದು ದೇಶದ ಅತಿ ದೊಡ್ಡ ಸೆಕ್ಸ್ ಸ್ಕ್ಯಾಂಡಲ್ ಅನ್ನುವುದರಲ್ಲಿ ಅನುಮಾನವಿಲ್ಲ. ಈ ನೀಚ ಕೃತ್ಯದಲ್ಲಿ ರೇವಣ್ಣ ಕೂಡ ಭಾಗಿಯಾಗಿರುವ ಆರೋಪವಿದೆ. ಈ ಪ್ರಕರಣದಲ್ಲಿ ಹಿಂದೂ ಮಹಿಳೆಯರಿಗೆ ಅನ್ಯಾಯವಾಗಿರುವ ಬಗ್ಗೆ ಬಿಜೆಪಿಯವರು ಖಂಡಿಸುತ್ತಿಲ್ಲ. ಮೋದಿ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುಬ್ಬಳ್ಳಿಯ ನೇಹಾ ಪ್ರೇಮ ವೈಫಲ್ಯ ಕೊಲೆ ಪ್ರಕರಣವನ್ನು ಹಿಂದೂ ಮುಸ್ಲಿಂ ಹೆಸರಿನಲ್ಲಿ ರಾದ್ಧಾಂತ ಮಾಡುವ ಮೂಲಕ ಕೋಮು ದ್ವೇಷ ಹರಡುವ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ ಎಂದು ದೂರಿದರು.

ಉಪಾಧ್ಯಕ್ಷ ಎಂ.ಯು.ಶರಿಫ್ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಇಂತಹದ್ದೇ ಘಟನೆಯಲ್ಲಿ ಆರೋಪಿ ಮುಸ್ಲಿಂ ಆಗಿದ್ದ ಕಾರಣಕ್ಕೆ ಮಾಧ್ಯಮಗಳು ಅರಚಾಡಿದ್ದವು. ಪ್ರಧಾನಿ ಮೋದಿ ಸಂತ್ರಸ್ತ ಮಹಿಳೆಯರನ್ನು ಖದ್ದು ಭೇಟಿ ಮಾಡಿದ್ದರು. ಅವರಲ್ಲಿ ಒಬ್ಬ ಮಹಿಳೆಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಸಹ ನೀಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಈ ಪ್ರಕರಣದಲ್ಲಿ ಇನ್ನಿಲ್ಲದ ಆಸಕ್ತಿ ತೋರಿಸಿ ಕ್ರಮ ಕೈಗೊಂಡಿತ್ತು. ಆದರೆ ಈಗ ಇದ್ಯಾವುದೂ ಇಲ್ಲ.

ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈ ಪ್ರಕರಣದಲ್ಲಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.

ಬಳಿಕ ತಾಲೂಕು ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಹುಮೆನ್ ಇಂಡಿಯಾ ಮೂಮೆಂಟ್ ಸಂಘಟನೆಯ ನಜರತ್ ಬಾನು, ನಯೀಮ್ ಅಖ್ತರ್, ಎಸ್‌ಡಿಪಿಐ ಕಾರ್ಯದರ್ಶಿ ನಾಗೇಶ್ ಸಾಲುಮರ, ಮುಖಂಡರಾದ ಜಾವೀದ್ ರಫೀಕ್, ಸಂತೋಷ್, ಮನ್ಸೂರ್ ಆಲ್ದೂರು ಮತ್ತಿತರರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ