October 5, 2024

ಕನ್ನಡ ಸಿನಿಮಾದ ಸಹನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಅವರನ್ನು ಆಕೆಯ ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ.

ಹತ್ಯೆಯಾದ ಸಹನಟಿ ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದು,  ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎನ್ನಲಾಗಿದೆ.

ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ಸಹನಟಿಯಾಗಿ ನಟಿಸಿದ್ದ ವಿದ್ಯಾ ನಂದೀಶ್  ಅನೇಕ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು.

ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ ಆರೋಪಿ ನಂದೀಶ್‌, ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ಸೋಮವಾರ ತಡರಾತ್ರಿ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ವಿದ್ಯಾ ತೆರಳಿದ್ದಾರೆ. ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿದ್ಯಾ ಅವರು ಅನೇಕ ಕನ್ನಡ ಚಿತ್ರಗಳಲ್ಲಿ ಸಹನಟಿಯಾಗಿ ನಟಿಸಿದ್ದಾರೆ. ದಂಪತಿ ನಡುವೆ ಮನಸ್ತಾಪ ಉಂಟಾಗಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಸೋಮವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು ಗಲಾಟೆ ವಿಕೋಪಕ್ಕೆ ಹೋಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ.

ಸ್ಥಳಕ್ಕೆ ಎಸ್ಪಿ ಸೀಮಾ ಲಾಟ್ಕರ್, ಎಎಸ್ಪಿ ನಂದಿನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯಗೈದ ಪತಿ ನಂದೀಶ್ ಸೆರೆಗೆ ಬನ್ನೂರು ಪೊಲೀಸರು ಬಲೆ ಬೀಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ