October 5, 2024

ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಭಾನುವಾರ ನಸುಕಿನ ಜಾವ ಹಾಸನ ಹೊರವಲಯದ ಈಚನಹಳ್ಳಿ ಬಳಿ ಸಂಭವಿಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು, ಒಂದು ಮಗು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು ಎನ್ನಲಾಗಿದೆ. ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಕಾರಿನೊಳಗಿಂದ ಶವಗಳನ್ನು ಹೊರತೆಗೆಯಲು ಪೊಲೀಸರು ಕಷ್ಟಪಟ್ಟರು.

ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಕಾರು   ಹಾಗೂ ಟ್ರಕ್   ನಡುವೆ ಭೀಕರ ಅಪಘಾತ ಸಂಭವಿಸಿದೆ.  ಮೃತರೆಲ್ಲರೂ ಚಿಕ್ಕಬಳ್ಳಾಪುರ ಮೂಲದವರು ಎಂದು ತಿಳಿದುಬಂದಿದೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ.

ಅಪಘಾತ ಸಂಭವಿಸಿದ ಸ್ಥಳವನ್ನು ಗಮನಿಸಿದಾಗ ಕಾರು ಸಂಪೂರ್ಣ ರಾಂಗ್ ಸೈಡ್ ಹೋಗಿ ಟ್ರಕ್ಕಿಗೆ ಡಿಕ್ಕಿ ಹೊಡೆದಿರುವಂತಿದೆ. ನಸುಕಿನ ಜಾವ  ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿರಬಹುದು  ಅಥವಾ ರಸ್ತೆಗೆ ಜಾನುವಾರುಗಳು ಅಡ್ಡಬಂದಿರುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿರುವ ಸಾಧ್ಯತೆಯೂ ಇದೆ ಎಂದು ಪ್ರತ್ಯಕ್ಷದರ್ಶಿಗಳು ಅಂದಾಜಿಸಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ಕಾರು ಮನೋಜ್ ಕುಮಾರ್ ಎಂಬುವರಿಗೆ ಸೇರಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆಯಷ್ಟೇ ಚಿಕ್ಕಮಗಳೂರು ಜಿಲ್ಲೆ ಬಣಕಲ್ ಸಮೀಪ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ನೆರೆಯ ಹಾಸನದಲ್ಲಿ ಮತ್ತೊಂದು ಭೀಕರ ಅಪಘಾತದಲ್ಲಿ ಆರು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ