October 5, 2024

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷನಾಗಿದ್ದು, ವಿದೇಶಕ್ಕೆ ಪರಾರಿಯಾದ ಸರಿಯಾಗಿ ಒಂದು ತಿಂಗಳ ನಂತರ ವಿಡಿಯೋ ಮೂಲಕ ತನ್ನ ಮುಖದರ್ಶನ ಮಾಡಿದ್ದಾನೆ. ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾನೆ. ಈ ಕುರಿತು ಪ್ರಜ್ವಲ್‌  ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾನೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾನೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾನೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ