October 5, 2024

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಡಿಯೋ ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಂಗಳವಾರ ಸೆಕ್ಸ್ ಹಗರಣದ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳನ್ನು ಹಂಚಿದ್ದ ಆರೋಪ ಎದುರಿಸುತ್ತಿರುವ ಬೇಲೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆಯುವ ನಿಟ್ಟಿನಲ್ಲಿ ಹೈಕೋರ್ಟ್‌ಗೆ ಬಂದಾಗ ಅವರನ್ನು ಬಂಧಿಸಲಾಗಿದೆ. ಬಂಧಿತರನ್ನು ನವೀನ್ ಗೌಡ ಮತ್ತು ಚೇತನ್ ಎಂದು ಗುರುತಿಸಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪೆನ್ ಡ್ರೈವ್ ಹಂಚಿಕೆ ಸಂಬಂಧ ತಮ್ಮ ಫೇಸ್ಬುಕ್ಖಾತೆಯಲ್ಲಿ ನವೀನ್ಗೌಡ ಹಾಕಿದ್ದ ಪೋಸ್ಟ್ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಮತದಾನಕ್ಕೂ ನಾಲ್ಕು ದಿನಗಳ ಮುನ್ನ ಪ್ರಜ್ವಲ್ ರೇವಣ್ಣರವರ ಪೆನ್ಡ್ರೈವ್ ಹಂಚಿಕೆಗೆ ಕ್ಷಣಗಣನೆ ಎಂದು ಆತ ಪೋಸ್ಟ್ ಹಾಕಿದ್ದ. ಇದಾದ ಬಳಿಕ ತಾನು ಪೆನ್ಡ್ರೈವ್ ಅನ್ನು ಅರಕಲಗೂಡು ಶಾಸಕ .ಮಂಜು ಅವರಿಗೆ ಕೊಟ್ಟಿದ್ದೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಈತನ ವಿರುದ್ಧ ಎಸ್ಐಟಿಗೆ ಶಾಸಕ ಮಂಜು ದೂರು ಕೂಡ ಸಲ್ಲಿಸಿದ್ದರು.

ಲೋಕಸಭಾ ಚುನಾವಣೆ ವೇಳೆ ಸಂಸದ ಪ್ರಜ್ವಲ್ ವಿರುದ್ಧ ಆಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಹಂಚಿಕೆ ಮಾಡಲಾಗಿದೆ ಎಂದು ಹಾಸನ ಸಿಇಎನ್ಠಾಣೆಯಲ್ಲಿ ಸಂಸದರ ಚುನಾವಣಾ ಏಜೆಂಟ್ ಪೂರ್ಣಚಂದ್ರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಹಾಸನದ ಬಿಜೆಪಿ ಕಾರ್ಯಕರ್ತರಾದ ಚೇತನ್‌, ಲಿಖಿಲ್ಹಾಗೂ ವಕೀಲ ದೇವರಾಜೇಗೌಡ ಸೇರಿ ಮೂವರನ್ನು ಎಸ್ಐಟಿ ಬಂಧಿಸಿತ್ತು. ಕೃತ್ಯ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ನವೀನ್ ಗೌಡ ಪತ್ತೆಗೆ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದರು. ಅಲ್ಲದೆ ನವೀನ್ಗೌಡನಿಗೆ ರಾಜಕೀಯ ನಾಯಕರ ಬೆಂಬಲವಿರುವ ಕಾರಣಕ್ಕೆ ಆತನನ್ನು ಬಂಧಿಸುತ್ತಿಲ್ಲ ಎಂದು ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಟೀಕಿಸಿದ್ದರು.

ಬಂಧಿತರಲ್ಲಿ ಓರ್ವನಾಗಿರುವ ನವೀನ್‌ ಗೌಡ ಕಾಂಗ್ರೇಸ್ ಕಾರ್ಯಕರ್ತನಾಗಿದ್ದು,  ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ