October 5, 2024

ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

ದೇಶದಿಂದ ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿಕೆ ನೀಡಿದ್ದ. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ 30ನೇ ತಾರೀಕಿನಂದು ವಿಮಾನ ಬುಕ್ ಸಹ ಮಾಡಿದ್ದ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ಬಂಧನಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು.

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ಹಾಗೂ ಲುಕ್ ಔಟ್ ನೋಟಿಸ್ ಸಹ ಹೊರಡಿಸಲಾಗಿತ್ತು. ಇದೀಗ ಲುಫ್ತಾನ್ಸ ಎಲ್ಎಚ್ 764 ವಿಮಾನದಲ್ಲಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಿದ್ದು.  ಮೊದಲಿಗೆ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿದ್ದಾರೆ. ನಂತರ ಪ್ರಜ್ವಲ್ ನನ್ನು ಎಸ್ ಐ ಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆಸಿದ್ದ ಆರೋಪವನ್ನು ಎದುರಿಸುತ್ತಿದ್ದು, ಅದರ ವಿಡಿಯೋ ತುಣುಕುಗಳು ಎಲ್ಲೆಡೆ ಹರಿದಾಡಿದ್ದವು. ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳವನ್ನು ರಚಿಸಿತ್ತು.

ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದನು. ಇದೀಗ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್ಐಟಿ ಪೊಲೀಸರು ಎಸ್ಐಟಿ ಕಚೇರಿಗೆ ಕರೆತರುತ್ತಿದ್ದಾರೆ.

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ತಮ್ಮ ವಶಕ್ಕೆ ಕೇಳಲಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ