October 5, 2024

ಸಾಂದರ್ಭಿಕ ಚಿತ್ರ

ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ರೀತಿಯಲ್ಲಿ ಸಾವಿಗೀಡಾದ ಘಟ‌ನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ನರಸೀಪುರ ಗ್ರಾಮದಲ್ಲಿ ನಡೆದಿದೆ.

ದೀಕ್ಷಿತ್ (10), ನಿತ್ಯಶ್ರೀ (12) ಕುಸುಮ (6) ಮೃತ ದುರ್ದೈವಿಗಳು.

ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ಮೂರು ಮಕ್ಕಳಲ್ಲಿ ಒಬ್ಬ ಬಾಲಕಿ ಆಕಸ್ಮಿಕವಾಗಿ ಮುಳುಗಿದ್ದು, ಆಕೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಮಿಕ್ಕಿಬ್ಬರೂ ಮುಳುಗಿದ್ದಾರೆ. ಸ್ಥಳೀಯರು ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ.  ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಹಾಸನ ಜಿಲ್ಲೆಯ ಆಲೂರು ಸಮೀಪ ನಾಲ್ಕು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನ ಮತ್ತೆ ಅಂತಹುದೇ ಅನಾಹುತ ಹಾಸನ ಜಿಲ್ಲೆಯ ನಡೆದಿದೆ.

ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ