October 5, 2024

ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದ್ದು ಇದರ ಆಧಾರದ ಮೇಲೆ ಒಟ್ಟು 11ರಲ್ಲಿ 7 ಸ್ಥಾನಗಳನ್ನು ಕಾಂಗ್ರೆಸ್​ ಗೆಲ್ಲುವ ಅವಕಾಶವಿದ್ದು ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಜೊತೆಗೆ ಜಗದೀಶ್ ಶೆಟ್ಟರ್ ರಾಜಿನಾಮೆಯಿಂದ ತೆರವಾಗಿರುವ 1 ಸ್ಥಾನದ ಉಪಚುನಾವಣೆಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್​ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

ಕಾಂಗ್ರೆಸ್ ಏಳು ಪರಿಷತ್​ ಸ್ಥಾನಗಳಿಗೆ ಮಾತ್ರವಲ್ಲದೇ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್​ ಸ್ಥಾನಕ್ಕೂ ಅಭ್ಯರ್ಥಿಯನ್ನು ಘೋಷಿಸಿದೆ. ಮುಂಬರುವ ಉಪಚುನಾವಣೆಗೆ ಮಾಜಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ