October 5, 2024

ಇಂದಿನಿಂದ ಟಿ-20 ವಿಶ್ವಕಪ್ ಪಂದ್ಯಾವಳಿ ಆರಂಭವಾಗುತ್ತಿದೆ. ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ವಿಶ್ವಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಮೇರಿಕಾ ಸೇರಿದಂತೆ 20 ತಂಡಗಳು ಕಣಕ್ಕಿಳಿಯುತ್ತಿದ್ದು, ಈ ತಂಡಗಳನ್ನು 4 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್​ನಲ್ಲಿರುವ ತಂಡಗಳ ನಡುವೆ 4 ಲೀಗ್ ಪಂದ್ಯಗಳು ನಡೆಯಲಿದೆ. ಇಲ್ಲಿ ಆಯಾ ಗ್ರೂಪ್​ಗಳಿಗೂ ಅಂಕ ಪಟ್ಟಿ ಇರಲಿದ್ದು, ಈ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೇರಲಿದೆ.

ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಇಂದು ಮೊದಲ ಪಂದ್ಯದಲ್ಲಿ ಅಮೇರಿಕಾ ತಂಡ ಕೆನಡಾ ತಂಡವನ್ನು ಎದುರಿಸಲಿದೆ.

ಭಾರತ ತಂಡವು ಜೂನ್ 5 ರಂದು ತನ್ನ ಮೊದಲ ಪಂದ್ಯವನ್ನಾಡಲಿದೆ. ಅದರಂತೆ ಲೀಗ್​ ಹಂತದಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ

ಜೂನ್ 5 (ಬುಧವಾರ) ಭಾರತ vs ಐರ್ಲೆಂಡ್: ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಆಡಲಿದೆ. ಜೂನ್ 5 ರಂದು ನಡೆಯಲಿರುವ ಈ ಪಂದ್ಯಕ್ಕೆ ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.

ಜೂನ್ 9 (ಭಾನುವಾರ) ಭಾರತ vs ಪಾಕಿಸ್ತಾನ್: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜೂನ್ 9 ರಂದು ಮುಖಾಮುಖಿಯಾಗಲಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿರುವ ಈ ಪಂದ್ಯಕ್ಕೂ ನ್ಯೂಯಾರ್ಕ್​ನ ನೂತನ ಕ್ರಿಕೆಟ್​ ಸ್ಟೇಡಿಯಂ ನಸ್ಸೌ ಇಂಟರ್​ನ್ಯಾಷನಲ್ ಗ್ರೌಂಡ್​ ಆತಿಥ್ಯವಹಿಸಲಿದೆ.

ಜೂನ್ 12 (ಬುಧವಾರ) ಭಾರತ vs ಯುಎಸ್​ಎ: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ಜೂನ್ 12 ರಂದು ನಡೆಯಲಿರುವ ಟಿ20 ವಿಶ್ವಕಪ್​ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ.

ಜೂನ್ 15 (ಶನಿವಾರ) ಭಾರತ vs ಕೆನಡಾ: ಅಮೆರಿಕದ ಲಾಡರ್ಹಿಲ್​ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 33ನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶರುವಾಗಲಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 20 ತಂಡಗಳು ಕಣಕ್ಕಿಳಿಯುತ್ತಿದ್ದು, ಈ ತಂಡಗಳನ್ನು 4 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್​ನಲ್ಲಿರುವ ತಂಡಗಳ ನಡುವೆ ಲೀಗ್ ಪಂದ್ಯಗಳು ನಡೆಯಲಿದೆ. ಈ ನಾಲ್ಕು ಲೀಗ್ ಪಂದ್ಯಗಳ ಬಳಿಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ 2 ತಂಡಗಳು ಸೂಪರ್-8 ಹಂತಕ್ಕೇರಲಿದೆ. ಆ ಬಳಿಕ 8 ತಂಡಗಳ ನಡುವೆ ಸೂಪರ್-8 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ತಂಡಗಳು ಸೆಮಿಫೈನಲ್​ಗೇರಲಿದೆ.

ಭಾರತ ಟಿ20​ ವಿಶ್ವಕಪ್ ತಂಡ:

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ