October 5, 2024

ಮೂಡಿಗೆರೆ ಪಟ್ಟಣದ ಬಿಜಿಎಸ್ ವಿಎಸ್ ಶಾಲೆ ಆವರಣದಲ್ಲಿ ಜೂನ್ 8ರಂದು ಚಿಕ್ಕಮಗಳೂರು ಡಿಸ್ಟ್ರಿಕ್ ಚೆಸ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟಕ್ಕೆ ಚೆಸ್ ಪಟುಗಳ ಅಯ್ಕೆಗಾಗಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಡಿಸ್ಟ್ರಿಕ್ ಚೆಸ್ ಅಸೋಸಿಯೇಷನ್‍ನ ಅಧ್ಯಕ್ಷ ನಯನ ತಳವಾರ ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ ಅಂಡರ್ 7, 9, 11, 13, 15 ಮತ್ತು ಅಂಡರ್ 19ರ ಬಾಲಕ, ಬಾಲಕಿಯರ ವಿಭಾಗ ನಡೆಸಲಾಗುವುದು ಪಂದ್ಯಾವಳಿಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಜೂನ್ 6 ಸಂಜೆ 6 ಗಂಟೆಯೊಳಗೆ ನೊಂದಾಯಿಸಿಕೊಳ್ಳಬೇಕು. ಚೆಸ್ ಪಂದ್ಯಾವಳಿ ಸ್ವಿಚ್ ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಸ್ಪರ್ಧಿಗಳು ಚೆಸ್ ಬೋರ್ಡ್ ತರುವ ಮೂಲಕ ನಿಗದಿತ ಸಮಯಕ್ಕೆ ಹಾಜರಿರಬೇಕು.

ಜುಲೈ ತಿಂಗಳಲ್ಲಿ ರಾಜ್ಯದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆ ನಡೆಸಲು ವಯೋಮಿತಿ 13ರ ಬಾಲಕ, ಬಾಲಕಿಯರ ಚೆಸ್ ಪಂದ್ಯಾವಳಿಯನ್ನು ಚಿಕ್ಕಮಗಳೂರು ನಗರದಲ್ಲಿ ಆಯೋಜಿಸಲು ಕರ್ನಾಟಕ ಚೆಸ್ ಅಸೋಸಿಯೇಷನ್ ಹಾಗೂ ಇಂಡಿಯನ್ ಚೆಸ್ ಅಸೋಷಿಯೇಷನ್ ತೀರ್ಮಾನಿಸಿದೆ. ಅಲ್ಲದೇ ಮುಂದಿನ ಯಾವುದೇ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಈ ಜಿಲ್ಲಾ ಮಟ್ಟದ ಪಂದದಲ್ಲಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ 9449665453 7353704367 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ