October 5, 2024

ಮೂಡಿಗೆರೆ ಸರ್ಕಾರಿ ಜೂನಿಯರ್ ಕಾಲೇಜು ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿನಿ ಅನನ್ಯಾ ಳಿಗೆ ಮರುಮೌಲ್ಯಮಾಪನದಲ್ಲಿ ಐದು ಅಂಕಗಳು ಹೆಚ್ಚುವರಿಯಾಗಿ ದೊರಕಿದ್ದು ಶಾಲೆಗೆ ಎರಡನೇ ಅತಿಹೆಚ್ಚು ಅಂಕಪಡೆದ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಷಯದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ಅನನ್ಯಾಳಿಗೆ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿಯಾಗಿ 5 ಅಂಕಗಳು ದೊರಕಿವೆ. ಇದರಿಂದ ಅನನ್ಯಾ ಪಡೆದಿರುವ ಶೇಕಡವಾರು 95.85 ಅಂಕಗಳನ್ನು ಗಳಿಸಿದ್ದು, ಈ ಮೂಲಕ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ.

ಅನನ್ಯಾ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮೂಡಿಗೆರೆಯ ಎಂ.ಎಸ್. ಅನಂತ್ ಮತ್ತು ಶ್ರೀಮತಿ ಲೀಲಾ ಅವರ ಪುತ್ರಿಯಾಗಿದ್ದು, ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ