October 5, 2024

ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌–ಬಿಜೆಪಿ ಮೈತ್ರಿ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಒಟ್ಟು 9,829 ಮತ ಗಳಿಸಿದ ಭೋಜೇಗೌಡ, ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್‌ 4,562 ಮತಗಳನ್ನು ಗಳಿಸಿ 2ನೇ ಸ್ಥಾನ ಪಡೆದರು.

ಪಕ್ಷೇತರ ಅಭ್ಯರ್ಥಿ ಎಸ್.ಆರ್.ಹರೀಶ್ ಆಚಾರ್ಯ 2,101 ಮತಗಳೊಂದಿಗೆ 3ನೇ ಸ್ಥಾನ ಗಳಿಸಿದರು.

ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಗುರುವಾರ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಒಟ್ಟು 19,479 ಮತಗಳಲ್ಲಿ 821 ಮತಗಳು ತಿರಸ್ಕೃತಗೊಂಡವು  ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್‌ ತಿಳಿಸಿದರು.

ಭೋಜೇಗೌಡ ಅವರು ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್‌ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದರು.

ಬೋಜೇಗೌಡರು ಸತತ ಎರಡನೇ ಅವಧಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗುತ್ತಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ