October 5, 2024

ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯದಿಂದಿರಲು ಯೋಗ ಅತೀ ಮುಖ್ಯವಾಗಿದ್ದು, ದಿನ ನಿತ್ಯದ ಜೀವನದಲ್ಲಿ ಯೋಗಭ್ಯಾಸವನ್ನು ಅಳವಡಿಸಿಕೊಂಡಲ್ಲಿ ಸದೃಢರಾಗಿರಲು ಸಾಧ್ಯ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ವಿವಿಧ ಯೋಗ ಸಂಘ / ಸಂಸ್ಥೆಗಳ ಸಹಯೋಗದೊಂದಿಗೆ ಇವರು ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಂಡಲ್ಲಿ ಮನಸ್ಸಿನಲ್ಲಿ ಏಕಾಗ್ರತೆ ಮೂಡಿ ಆತಂಕ ದೂರವಾಗುತ್ತದೆ. ಮನಸ್ಸು, ಶರೀರ, ಆತ್ಮ ಒಂದುಗೂಡುವುದೇ ಯೋಗ. ನಮ್ಮ ದೇಹ, ಮನಸ್ಸು ನಿರ್ವಹಣೆಗೆ ಯಾವುದೇ ಔಷಧಿಗಳಿಲ್ಲದೆ ಪ್ರತಿನಿತ್ಯ ಯೋಗ ಮಾಡುವುದರಿಂದ ತುಂಬಾ ಲಾಭವಾಗುತ್ತದೆ. ಸ್ವಯಂ ಪ್ರೇರಿತರಾಗಿ ಪ್ರತಿಯೊಬ್ಬರು ಯೋಗವನ್ನು ದಿನನಿತ್ಯದ ಜೀವನ ಶೈಲಿಯಾಗಿ ಅಳವಡಿಸಿಕೊಳ್ಳುವುದರ ಜೊತೆಗೆ ನಿಮ್ಮ ಸುತ್ತಮುತ್ತಲಿನ ವರೆಗೂ ಯೋಗದ ಮಹತ್ವ ತಿಳಿಸುವ ಜೊತೆಗೆ ಆಧುನಿಕ ಜೀವನ ಶೈಲಿಯಿಂದ ದೂರವಿದ್ದು, ಉತ್ತಮ ಜೀವನದತ್ತ ಹೆಜ್ಜೆ ಹಾಕಬೇಕಾಗಿದೆ. ಒಂದು ದಿನಕ್ಕೆ ಮಾತ್ರ ಯೋಗ ಸೀಮಿತವಾಗಿರದೆ ದಿನನಿತ್ಯ ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಯೋಗವು ಆಯುರ್ವೇದದ ಅವಿಭಾಗ್ಯ ಅಂಗವಾಗಿದ್ದು, ಇಡೀ ಪ್ರಪಂಚಕ್ಕೆ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ತನಗಾಗಿ ಮತ್ತು ಸಮಾಜಕ್ಕಾಗಿ ಯೋಗ ಎಂಬುದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಘೋಷ ವಾಕ್ಯವಾಗಿದ್ದು, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ ದೈಹಿಕ ಆರೋಗ್ಯವನ್ನು ಮೀರಿ ಯೋಗವು ಮಾನಸಿಕ ಯೋಗ ಕ್ಷೇಮಕ್ಕೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ, ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಮಾನಸಿಕವಾಗಿ ಸ್ಪಷ್ಟತೆಯನ್ನು ಉತ್ತೇಜಿಸುತ್ತದೆ ಆತಂಕ ಮತ್ತು ಖಿನ್ನತೆಯನ್ನು ಹೋಗಲಾಡಿಸಲು ನಿರ್ಣಾಯಕವಾಗಿದ್ದು ಪ್ರತಿನಿತ್ಯ ಯೋಗ ಮಾಡಬೇಕೆಂದು ಹೇಳಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ವಿಶ್ವಸಂಸ್ಥೆ 2014 ರಲ್ಲಿ ಸರ್ವಾನುಮತದಿಂದ ಜೂನ್ 21 ನ್ನು ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದೆ. ಇಂದು ವಿಶ್ವದ 187 ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತದೆ ಎಂದ ಅವರು. ಯೋಗವನ್ನು ನಿಯಮಿತವಾಗಿ ಮಾಡುವುದರಿಂದ ರಕ್ತ ಪರಿಚಲನೆ, ಜೀರ್ಣಕ್ರಿಯೆ ಸರಾಗವಾಗಿ ಉಂಟಾಗಿ ದೈಹಿಕ ಸ್ಥಿತಿಗತಿ ಉತ್ತಮವಾಗುತ್ತದೆ. ಅಲ್ಲದೆ ಒತ್ತಡದ ಜೀವನ ಶೈಲಿಯಿಂದ ಪರಾಗಿ ಮಾನಸಿಕ ನೆಮ್ಮದಿ ಪಡೆಯಲು ಯೋಗ ಸಹಕರಿಯಾಗಿದೆ ಎಂದು ತಿಳಿಸಿದರು.

ಆಯುಷ್ ಇಲಾಖೆ ಅಧಿಕಾರಿ ಡಾ. ಹೇಮ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿನಿತ್ಯ ಯೋಗ ಮಾಡುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಹಾಗೂ ಮಾನಸಿಕ ಒತ್ತಡದ ನಿವಾರಣೆಗೆ ಯೋಗ ಸಹಕರಿಯಾಗಿದೆ ಅಲ್ಲದೆ ಬದಲಾದ ಜೀವನ ಶೈಲಿಯನ್ನು ಹತೋಟಿಗೆ ತರಲು ಯೋಗ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶ್ವಥ್ ಬಾಬು, ಆಯುಷ್ ಅಧಿಕಾರಿ ಡಾ. ಗೀತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ವಿವಿಧ ಯೋಗ ಸಂಘ ಸಂಸ್ಥೆಗಳು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾ ಎನ್ ಎಸ್ ಎಸ್ ಘಟಕ ಹಾಗೂ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಸಾಮೂಹಿಕ ಯೋಗದಲ್ಲಿ ಪಾಲ್ಗೊಂಡಿದ್ದರು

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕನ್ನು ಸನ್ಮಾನಿಸಲಾಯಿತು. ಚಿಕ್ಕಮಗಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ಆಯುರ್ವೇದ ಆಸ್ಪತ್ರೆಯ ಯೋಗಗುರು ಬೋಜರಾಜು, ನೀರಿನಲ್ಲಿ ತೇಲುತ್ತಾ ಯೋಗ ಮಾಡುವ ಮೂಲಕ ಗಮನಸೆಳೆದಿರುವ ಯೋಗಪಟು ಮತ್ತು ವಕೀಲ ವಿ.ಕೆ. ರಘು, ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ, ಪ್ರಗತಿಪರ ಕೃಷಿಕ ಮಾಡ್ಲ ಪ್ರಕಾಶ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ