October 5, 2024

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆಯಿದೆ. ಆ ನಿಟ್ಟಿನಲ್ಲಿ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಚಿಕ್ಕಮಗಳೂರು ಜಿಲ್ಲಾ ಘಟ ಕದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳೊಂದಿಗೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಎಸ್‌ಟಿಜೆ, ಟಿಎಂಎಸ್, ಎಂಇಎಸ್ ಸೇರಿದಂತೆ ಇತರೆ ಕಾಲೇ ಜಿನ ವಿದ್ಯಾರ್ಥಿಗಳು ಎಂ.ಜಿ.ರಸ್ತೆ ಮುಖಾಂತರ ಮೆರವಣಿಗೆ ಜಾಥಾ ನಡೆಸಿ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದರು.

ಕಾಂಗ್ರೆಸ್ ಜಿಲ್ಲಾ ವಕ್ತಾರ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ ನೀಟ್ ಪರೀಕ್ಷೆಯ ಫಲಿತಾಂಶ ವಿ ವಾದಗಳಿಂದ ಕೂಡಿದೆ. ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣಗಳಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿ ಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಕೇಂದ್ರ ಸರ್ಕಾರ ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂಬುದು ದೇಶಾದ್ಯಂತವಿರುವ ವಿದ್ಯಾರ್ಥಿಗಳು ಕೂಗಾಗಿದೆ. ನೀಟ್ ಫಲಿತಾಂಶದ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದೆ ಎಂದು ತಿಳಿಸಿದರು.

ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಆದಿಲ್ ಮಾತನಾಡಿ 67 ವಿದ್ಯಾರ್ಥಿಗಳು ಮೊದಲ ರ್‍ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ್‍ಯಾಂಕ್ ಮಾಡಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಾಗಿದೆ. ಅಲ್ಲದೇ ರ್‍ಯಾಂಕ್ ಗಳಿಸಿರುವ ವಿದ್ಯಾರ್ಥಿಗಳು ಒಂದೇ ತರ ಬೇತಿ ಕೇಂದ್ರವರಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದರು.

ತರಾತುರಿ ಕೃಪಾಂಕ ನೀಡಿರುವುದು, ಲೋಕಸಭಾ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿ ತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ದೇಶದ ಕೆಲವೆಡೆ ವಿದ್ಯಾ ರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುವ ನಿರ್ಧಾರ ಕೈಬಿಟ್ಟು ನ್ಯಾಯಯುತ ಹೋರಾಟಕ್ಕೆ ಮುಂದಾಗಬೇಕು ಎಂದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಬಿ.ಟಿ.ಸುಮಂತ್ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬುದು ಇಡೀ ದೇಶದ ವೈದ್ಯಕೀಯ ಸೀಟು ಆಕಾಂಕ್ಷಿಗಳು, ಪಾಲಕರು ಹಾಗೂ ಒಕ್ಕೂಟವು ಆಗ್ರಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಸುಧೀರ್‌ಕುಮಾರ್ ಮುರಳಿ, ಎನ್‌ಎಸ್‌ಯುಐ ಮಾಜಿ ಅಧ್ಯಕ್ಷ ರಾದ ಧೃವಕುಮಾರ್, ವೆಂಕಟೇಶ್, ಕಾರ್ಯದರ್ಶಿಗಳಾದ ಸುನೀಲ್, ವಿನಯ್, ಸಹ ಕಾರ್ಯದರ್ಶಿ ಯೋಗೀಶ್, ಸದಸ್ಯರುಗಳಾದ ಚೇತನ್, ಪ್ರೀತiಗೌಡ ಮತ್ತಿತರರು ಹಾಜರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ