October 5, 2024

ಜಿಂಬಾಬ್ವೆ ಪ್ರವಾಸದಲ್ಲಿ ನಡೆಯಲಿರುವ ಐದು ಪಂದ್ಯಗಳ ಟಿ 20 ಕ್ರಿಕೆಟ್ ಸರಣಿಗೆ ಬಿಸಿಸಿಐ  ಭಾರತ ತಂಡವನ್ನು   ಪ್ರಕಟಿಸಲಾಗಿದೆ. ಇದು ಸೀಮಿತ ಓವರ್​ಗಳ ಸರಣಿಯಾಗಿದ್ದು ಯುವ ಆಟಗಾರರ ಪಡೆ ಜಿಂಬಾಬ್ವೆಗೆ ಭೇಟಿ ನೀಡಲಿದೆ.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರವಾಸಕ್ಕಾಗಿ ಎರಡನೇ ಹಂತದ ತಂಡವನ್ನು ಆಯ್ಕೆ ಮಾಡಿದೆ. ಭಾರತ ತಂಡವು ಪ್ರಸ್ತುತ ಟಿ 20 ವಿಶ್ವಕಪ್​ನಲ್ಲಿ ಆಡುತ್ತಿರುವುದರಿಂದ, ವಿಶ್ವಕಪ್ ತಂಡದ ಹೆಚ್ಚಿನ ಆಟಗಾರರಿಗೆ ಜಿಂಬಾಬ್ವೆ ವಿರುದ್ಧದ ಸರಣಿಗೆ ವಿಶ್ರಾಂತಿ ನೀಡಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಅಂತೆಯೇ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿರುವುದರಿಂದ ಮುಂಬರುವ ಸರಣಿಗೆ ಶುಭ್ಮನ್ ಗಿಲ್ ಅವರನ್ನು ನಾಯಕರನ್ನಾಗಿ ಹೆಸರಿಸಲಾಗಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಸರಣಿ ಜುಲೈ 6 ರಿಂದ 14 ರವರೆಗೆ ನಡೆಯಲಿದೆ. ಎಲ್ಲಾ ಪಂದ್ಯಗಳು ಹರಾರೆಯಲ್ಲಿ ನಡೆಯಲಿವೆ. ಅಭಿಷೇಕ್ ಶರ್ಮಾ, ಧ್ರುವ್ ಜುರೆಲ್, ನಿತೀಶ್ ರೆಡ್ಡಿ, ರಿಯಾನ್ ಪರಾಗ್ ಮತ್ತು ತುಷಾರ್ ದೇಶಪಾಂಡೆ ಅವರಂತಹ ಹಲವಾರು ಆಟಗಾರರಿಗೆ ಆಯ್ಕೆದಾರರು ಮೊದಲ ಬಾರಿಗೆ ಅವಕಾಶ ನೀಡಿದ್ದಾರೆ. ಭಾರತ ತಂಡವನ್ನು ಮುನ್ನಡೆಸಲಿರುವ ಶುಬ್ಮನ್ ಗಿಲ್ ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್ ತಂಡ ನಾಯಕತ್ವ ವಹಿಸಿದ್ದರು.

ತಂಡ: ಶುಬ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ