October 5, 2024

ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ವರ್ಗಾವಣಾ ಮಾರ್ಗಸೂಚಿಗಳನ್ನು   ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ವರ್ಗಾವಣೆ ಸಂಖ್ಯೆಯು ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಜೂನ್‌ 25ರಿಂದ ಜುಲೈ 9ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ. ವರ್ಗಾವಣೆಯಲ್ಲಿ ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರವು ಇಚ್ಛಿಸುತ್ತದೆ. ಈ ಮಾರ್ಗಸೂಚಿಗಳು 2024-25 ನೇ ಸಾಲಿನಿಂದ ಜಾರಿಗೆ ಬರುತ್ತವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ