October 5, 2024

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಹಿತದೃಷ್ಟಿಯಿಂದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಅವರು ಮಾತನಾಡಿದರು. ಇದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಸಭೆಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಐವರು ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸೇರಿದಂತೆ ಎಲ್ಲಾ 40 ಸಂಸದರು ಸಭೆಯಲ್ಲಿ ಭಾಗವಹಿಸಿದ್ದರು.  ರಾಜ್ಯದ ಐವರು ಸಂಸದರು ಕೇಂದ್ರ ಸಚಿವರಾಗಿರುವ ಕಾರಣ, ಸಿದ್ದರಾಮಯ್ಯ ತಮ್ಮ ಕ್ಯಾಬಿನೆಟ್ ನ ಆಯ್ದ ಸಹೋದ್ಯೋಗಿಗಳನ್ನು ಕರ್ನಾಟಕದ ಅಭಿವೃದ್ಧಿ ಕುರಿತು ಸಭೆಗೆ ಕರೆದುಕೊಂಡು ಹೋಗಿದ್ದರು.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಚಿವರು ಮತ್ತು ಇತರ ಸಂಸದರು ಪೂರ್ಣ ಪ್ರಮಾಣದಲ್ಲಿ ಹಾಜರಿದ್ದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ , ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಮತ್ತು ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ