October 5, 2024

ಕಾಂಗ್ರೆಸ್ ಪಕ್ಷದ ಚಿಕ್ಕಮಗಳೂರು ಜಿಲ್ಲಾ ವಕ್ತಾರರಾಗಿ ಎಂ.ಎಸ್. ಅನಂತ್ ಅವರನ್ನು ನೇಮಕ ಮಾಡಲಾಗಿದೆ.

ಎಂ.ಎಸ್. ಅನಂತ್ ಅವರನ್ನು ಜಿಲ್ಲಾ ವಕ್ತಾರರನ್ನಾಗಿ ನೇಮಕ ಮಾಡಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ನೀಡಿದ್ದಾರೆ.

ಎಂ.ಎಸ್. ಅನಂತ್ ಅವರು ಮೂಲತಃ ಮೂಡಿಗೆರೆ ತಾಲ್ಲೂಕಿನ ಮಗ್ಗಲಮಕ್ಕಿಯರಾಗಿದ್ದು, ಪ್ರಸ್ತುತ ಮೂಡಿಗೆರೆಯಲ್ಲಿ ನೆಲೆಸಿದ್ದಾರೆ. ಮಾಜಿ ಸಚಿವೆ ಶ‍್ರೀಮತಿ ಮೋಟಮ್ಮನವರ ಅಣ್ಣನ ಮಗ. ಒಂದು ಅವಧಿಗೆ ಮೂಡಿಗೆರೆ ಕಸಬಾ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಉಪಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಇಂಜಿನಿಯರ್ ಪದವೀಧರರಾದ ಅನಂತ್ ಹಲವು ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕೆಪಿಸಿಸಿ ಸಂಪನ್ಮೂಲ ಅಭಿವೃದ್ದಿ ತರಬೇತುದಾರರಾಗಿ, ಮೂಡಿಗೆರೆ ಯೂತ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾಗಿ, ಮೂಡಿಗೆರೆ ಕಾಂಗ್ರೇಸ್ ಎಸ್ಸಿ ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೇಸ್ ಸಮಿತಿ ಕಾರ್ಯದರ್ಶಿಯಾಗಿ, ಮೂಡಿಗೆರೆ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರವೊಂದರಲ್ಲಿ ವೀಕ್ಷಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ರಾಜಕೀಯವಲ್ಲದೆ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿಯೂ ಅನಂತ್ ಸಕ್ರಿಯರಾಗಿದ್ದಾರೆ. ಭಾರತೀಯ ಬೌಧ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾಗಿದ್ದಾರೆ. ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ, ಡಾ. ಬಿ.ಆರ್. ಅಂಬೇಡ್ಕರ್ ಅದ್ಯಯನ ಸಂಸ್ಥೆ ಸೇರಿದಂತೆ ವಿವಧ ಸಂಘಟನಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮೂಡಿಗೆರೆಯಲ್ಲಿ ಪ್ರತಿವರ್ಷ ನಡೆಯುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಅನಂತ್ ಅವರು ಪಕ್ಷಕ್ಕಾಗಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರನ್ನು ಪಕ್ಷದ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೇಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ