October 5, 2024

ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಹೇಳಿದರು.

ಮೇ ತಿಂಗಳಲ್ಲಿ ಎಲ್ಲರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷ ಕಾರ್ಯಭಾರ ಮಾಡುತ್ತದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ.

ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಎನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ