October 5, 2024

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿಕ್ಕಮಗಳೂರು ಇದರ ನಿರ್ದೇಶನದಂತೆ ಜುಲೈ 13ರಂದು ಮೂಡಿಗೆರೆ ನ್ಯಾಯಾಲಯದಲ್ಲಿ ಲೋಕ್‍ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ ದಿನ ಸಿವಿಲ್ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಅಮಾನ್ಯ, ಮೋಟಾರು ವಾಹನ ಕಾಯ್ದೆ (ಎಂವಿಸಿ) ಪ್ರಕರಣಗಳು, ಬ್ಯಾಂಕ್‍ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದ ನೀರಿನ ಕಂದಾಯ ಪ್ರಕರಣಗಳು ರಾಜಿಮಾಡಿಕೊಳ್ಳಬಹುದು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ಯಾವುದೇ ಹಂತಗಳಲ್ಲಿ ರಾಜಿ ಮಾಡಿಕೊಳ್ಳಬಹುದಾಗಿದ್ದು, ತಾವು ಖುದ್ದು ವಕೀಲರ ಮೂಲಕ ನ್ಯಾಯಾಲಯಕ್ಕೆ ಆಗಮಿಸಿ ತಮ್ಮ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.

ಲೋಕ್ ಅದಾಲತ್‍ನಲ್ಲಿ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವುದರಿಂದ ತಾವು ನ್ಯಾಯಾಲಯಕ್ಕೆ ಪಾವತಿಸಿದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಹಿಂಪಡೆಯಬಹುದಾಗಿರುತ್ತದೆ. ಒಮ್ಮೆ ಲೋಕ್ ಅದಾಲತ್‍ನಲ್ಲಿ ಪ್ರಕರಣಗಳು ರಾಜಿ ಆದಲ್ಲಿ ಮೇಲ್ಮನವಿಗೆ ಅವಕಾಶವಿರುವುದಿಲ್ಲ.

ಆದ್ದರಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಸಮಯದ ಉಳಿತಾಯ ಮತ್ತು ಮಾನಸಿಕ ನೆಮ್ಮದಿ ಹೊಂದಬಹುದಾಗಿದೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ