October 5, 2024

ಚಿಕ್ಕಮಗಳೂರು ನಗರದಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ವತಿಯಿಂದ ದಾಳಿ ನಡೆಸಿ ವ್ಯಾಪಾರ ಪರವಾನಗಿ ರದ್ದು ಮಾಡುವುದರ ಜೊತೆಗೆ ದಂಡ ವಿದಿಸಿ ಅಂಗಡಿಗೆ ಬೀಗ ಹಾಕಲಾಗಿದೆ ಎಂದು ನಗರಸಭೆ ಆಯುಕ್ತ ಬಸವರಾಜ್ ತಿಳಿಸಿದರು.

ಶುಕ್ರವಾರ ಎಂ.ಜಿ ರಸ್ತೆಯ ಶರೀಫ್ ಗಲ್ಲಿಯ ವರ್ಧಮಾನ್ ಏಜನ್ಸಿಸ್ ಮತ್ತು ದೇವಿ ಪ್ಲಾಸ್ಟಿಕ್ಸ್ ಅಂಗಡಿಗಳಿಗೆ ದಿಢೀರ್ ದಾಳಿ ನೆಡೆಸಿ 200 ಕೆ.ಜಿ ಪ್ಲಾಸ್ಟಿಕನ್ನು ವಶಪಡಿಸಿಕೊಂಡು ಅಂಗಡಿಗಳಿಗೆ ಬೀಗ ಹಾಕಿದರು.

ನಗರಸಭೆ ಆಯುಕ್ತ ಬಸವರಾಜ್ ಮಾತನಾಡಿ ನಗರಸಭೆಯಿಂದ ೫ ಅಧಿಕಾರಿಗಳ ತಂಡವನ್ನು ರಚಿಸಿ ನಗರದಲ್ಲಿ ಅನಧೀಕೃತವಾಗಿ ಪ್ಲಾಸ್ಟಿಕ್ ಮಾರಾಟ ಮಾಡುವ ವರ್ತಕರ ಅಂಗಡಿ ಮೇಲೆ ದಾಳಿ ಮಾಡಲಾಗಿದ್ದು, ಪ್ಲಾಸ್ಟಿಕ್ ಪತ್ತೆಯಾದ ವರ್ತಕರಿಗೆ 10 ಸಾವಿರ ರೂ ದಂಡ ವಿಧಿಸಲಾಗಿದೆ. ಅಂಗಡಿಗಳಿಗೆ ಬೀಗ ಹಾಕಲಾಗಿದೆ ಎಂದರು.

ಸಾರ್ವಜನಿಕರು ನಿಷೇಧಿತ ಪ್ಲಾಸ್ಟಿಕ್ ಬಳಸಬಾರದು, ಪರಿಸರ ಉಳಿಸಬೇಕು ಎಂದು ಮನವಿ ಮಾಡಿದ ಅವರು ಪ್ಲಾಸ್ಟಿಕ್ ಮಾಡಿದ ವರ್ತಕರಿಗೆ ಇಂದು ದಂಡ ವಿಧಿಸಿದ್ದು, ಮುಂದೆಯೂ ಎಚ್ಚರಗೊಳ್ಳದಿದ್ದರೆ ಪರವಾನಗಿಯನ್ನು ರದ್ದು ಮಾಡಿ ಅಂಗಡಿ ಮುಚ್ಚಿಸುತ್ತೇವೆ. ಅಗತ್ಯ ಬಿದ್ದರೆ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪರಿಸರ ಮತ್ತು ಮಾಲಿನ್ಯ ಅಧಿಕಾರಿ ರಾಧ ಸಹಾಯಕ ಕಾರ್ಯಪಾಲಕ ಅಭಿಯಂತರ ತೇಜಸ್ವಿನಿ, ಹಿರಿಯ ಆರೋಗ್ಯ ನಿರಿಕ್ಷಕರು ರಂಗಪ್ಪ, ನಾಗಪ್ಪ, ಬಸವರಾಜ್, ಸೂಪರ್‌ವೈಸರ್‌ಗಳಾದ ಮುರಗೇಶ್, ವಿವೇಕ್ ಮತ್ತಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ