October 5, 2024

ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿಗೆ ಮುಂದಾಗಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಕ್ರಮವಹಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ