October 5, 2024

ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ(57  ವರ್ಷ) ನಿಧನರಾಗಿದ್ದಾರೆ. ಗುರುವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, 3 ದಿನಗಳಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ  ಜನಿಸಿದ ಅಪರ್ಣಾ ವಸ್ತಾರೆ ಅವರು ಮೊದಲು ಬೆಳ್ಳಿ ತೆರೆಯ ಮೂಲಕವೇ ಸಿನಿಮಾ ರಂಗವನ್ನು ಪ್ರವೇಶಿಸಿದರು. ಅದರಲ್ಲೂ, 1984ರಲ್ಲಿ ಬಿಡುಗಡೆಯಾದ, ಪುಟ್ಟಣ್ಣ ಕಣಗಾಲ್‌ ನಿರ್ದೇಶನದ ಮಸಣದ ಹೂವು ಸಿನಿಮಾದ ಮೂಲಕ ಪದಾರ್ಪಣೆ ಮಾಡಿದ ಅವರು, ಮೊದಲ ಸಿನಿಮಾದಲ್ಲಿಯೇ ಅಪಾರವಾದ ಖ್ಯಾತಿ ಗಳಿಸಿದರು. ಅಲ್ಲದೆ, ಸಂಗ್ರಾಮ (1987), ನಮ್ಮೂರ ರಾಜ (1988), ಸಾಹಸ ವೀರ (1988), ಮಾತೃ ವಾತ್ಸಲ್ಯ (1988), ಒಲವಿನ ಆಸರೆ (1989), ಇನ್ಸ್‌ಪೆಕ್ಟರ್‌ ವಿಕ್ರಮ್‌ (1989), ಒಂದಾಗಿ ಬಾಳು (1989), ಡಾಕ್ಟರ್‌ ಕೃಷ್ಣ (1989), ಒಂಟಿ ಸಲಗ (1989), ಚಕ್ರವರ್ತಿ (1990) ಸೇರಿ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.

ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು. ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ನಲ್ಲಿ ವರಲಕ್ಷ್ಮೀ ಎಂಬ ಪಾತ್ರದ ಮೂಲದ ಎಲ್ಲರನ್ನೂ ರಂಜಿಸಿದ್ದರು.

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಅಪರ್ಣ ಕಾರ್ಯ ನಿರ್ವಹಿಸಿದ್ದರು.

ಅಪರ್ಣ ಅವರ ಪತಿ ಸಾಹಿತಿ ನಾಗರಾಜ್ ವಸ್ತಾರೆ ಮೂಲತಃ ನಮ್ಮ ಚಿಕ್ಕಮಗಳೂರಿನ ವಸ್ತಾರೆ ಗ್ರಾಮದವರು.

ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರ ರಂಗದ ಅನೇಕ ನಟ/ನಟಿಯರು ಅಪರ್ಣಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ