October 5, 2024

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಸೈಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ.

ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರತಿಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ.

ಸೋಮವಾರದಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧರಾಗಿವೆ. ಹೀಗಾಗಿ ರಾಜ್ಯ ಸರ್ಕಾರ ಮುಡಾ ಅಕ್ರಮದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆದೇಶ ಹೊರಡಿಸಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.

ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ಸೂಚನೆ ನೀಡಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ