October 5, 2024

ಮೂಡಿಗೆರೆ ತಾಲೂಕಿನಲ್ಲಿ ಮಳೆ ಆರ್ಭಟ ಅಧಿಕಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಜತೆಗೆ ಅಲ್ಲಿಲ್ಲಿ ಮರ, ಗುಡ್ಡ, ಮನೆ ಕುಸಿತಕ್ಕೊಳಗಾಗುತ್ತಿದೆ. ಮಳೆಯಿಂದ ಮನೆ ಕುಸಿತಗೊಂಡಿರುವ ಸಂತ್ರಸ್ತರ ನೆರವಿಗೆ ತಾಲೂಕು ಆಡಳಿತ ಧಾವಿಸುವ ಜತೆಗೆ ಶೀಘ್ರ ಪರಿಹಾರ ಒದಗಿಸಬೇಕೆಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ಈ ಬಾರಿ ಮುಂಗಾರು ಮಳೆ ಪ್ರಾರಂಭಗೊಂಡ ಬಳಿಕ ತಾಲೂಕಿನಾಧ್ಯಂತ ಮರಗಳು ರಸ್ತೆ ಹಾಗೂ ವಿದ್ಯುತ್ ತಂತಿ ಮೇಲೆ ಬಿದ್ದು, ವಾಹನ ಸಂಚಾರ ಹಾಗೂ ವಿದ್ಯುತ್ ಕಡಿತದಿಂದ ಜನ ತತ್ತರಿಸಿ ಹೋಗಿದ್ದಾರೆ. ಅಲ್ಲದೇ ಮನೆ ಕುಸಿದದಿಂದಾಗಿ ಸಂತ್ರಸ್ತರು ಬೀದಿಗೆ ಬೀಳುವ ಸ್ಥಿತಿ ಉಂಟಾಗಿದೆ. ಕಳೆದ ಭಾನುವಾರದಿಂದ ತಾಲೂಕಿನಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಇದರಿಂದ ಕೆಲ ಮನೆಗಳ ಮೇಲೆ ಮರ ಬಿದ್ದು, ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಕೆಲ ಮನೆಗಳು ಭಾಗಶಃ ಕುಸಿದಿದ್ದು, ಇದರಿಂದ ಸಂತ್ರಸ್ತರ ಪಾಡು ಹೇಳತೀರದಾಗಿದೆ. ಮಳೆಯಿಂದ ಮನೆ ಕುಸಿತಗೊಂಡಿರುವ ಸಂತ್ರಸ್ತರಿಗೆ ತುರ್ತು ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ನಿರಂತರ ಮಳೆಗೆ ಕೇವಲ ಮನೆ ಕುಸಿತ ಮಾತ್ರವಲ್ಲ. ತಾಲೂಕಿನಾಧ್ಯಂತ ಅನೇಕ ಮರಗಳು ಬಿದ್ದು, ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ. ಅಲ್ಲದೇ ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೂ ವಿದ್ಯುತ್ ಕಡಿತಗೊಂಡಿದ್ದರಿಂದ ಪಟ್ಟಣ ಸೇರಿದಂತೆ ಇಡಿ ತಾಲೂಕಿನ ಜನರು ಸೋಮವಾರ ರಾತ್ರಿ ಕತ್ತಲಿಲ್ಲಿ ಕಳೆದಿದ್ದಾರೆ. ಅಲ್ಲದೇ ಮೊಬೈಲ್ ನೆಟ್‍ವರ್ಕ್ ಕೂಡ ಸಿಗದೇ ಮಳೆ ಹಾನಿ ಬಗ್ಗೆ ಮಾಹಿತಿ ನೀಡಲು ಸಾಧ್ಯವಾಗದಂತಾಗಿದೆ. ಮಂಗಳವಾರ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ವಿದ್ಯುತ್ ಕಡಿತ ಹಾಗೂ ಮೊಬೈಲ್ ನೆಟ್‍ವರ್ಕ ಸಮಸ್ಯೆಯಿಂದ ಶಾಲೆಗೆ ರಜೆ ಘೋಷಣೆ ಬಗ್ಗೆ ಮಾಹಿತಿ ಇಲ್ಲದೇ ಬಹುತೇಕ ವಿದ್ಯಾರ್ಥಿಗಳು ಮಂಗಳವಾರ ಶಾಲೆಗೆ ಬಂದು ವಾಪಾಸು ತೆರಳಿದ್ದಾರೆ. ಇಲ್ಲಿನ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಾಗಾಗಿ ಶಾಸಕರು ಅಧಿಕಾರಿಗಳಿಗೆ ಕಡಕ್ ಎಚ್ಚರಿಕೆ ನೀಡಬೇಕು. ಜನರ ಕೆಲಸ ಮಾಡದ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾಯಿಸಬೇಕೆಂದು ಒತ್ತಾಯಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ