October 5, 2024

ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕತ್ತು ಹಿಸುಕಿ ಕೊಲೆ ಮಾಡಿ ಮಣ್ಣಿನಡಿ ಹೂತು ಹಾಕಿರುವ ಅಮಾನುಷ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಮೃತ ಯುವತಿ. ಕೊಲೆ ಮಾಡಿದವನನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಎಂದು ಗುರುತಿಸಲಾಗಿದೆ.

ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸೃಜನ್ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಸೃಜನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತೀರ್ಥಹಳ್ಳಿಯಲ್ಲಿ ಫೈನಾನ್ಸ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಸೃಜನ್‌ ಕೊಪ್ಪಕ್ಕೆ ಹಣ ವಸೂಲಿಗೆ ಹೋಗುತ್ತಿದ್ದ ವೇಳೆ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯಾಳ ಪರಿಚಯವಾಗಿತ್ತು. ಇಬ್ಬರ ನಡುವಿನ ಪರಿಚಯ ನಂತರ ಪ್ರೀತಿಯಾಗಿ ಬದಲಾಗಿತ್ತು. ಬೇರೆ ಬೇರೆ ಸಮುದಾಯ ಆಗಿದ್ದಕ್ಕೆ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಸೃಜನ್‌ ಕ್ರಮೇಣ ಸೌಮ್ಯಾಳಿಂದ ದೂರವಾಗತೊಡಗಿದ್ದ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಲು ಮುಂದಾಗಿದ್ದ ಸೃಜನ್‌ ಬಳಿ ಸೌಮ್ಯಾ ಮದುವೆಯಾಗುವಂತೆ ಆಗಾಗ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ.

ನಾಪತ್ತೆ ಪ್ರಕರಣ ದಾಖಲು, ಕೊಲೆ ರಹಸ್ಯ ಬಯಲು

ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಪೋಷಕರಿಗೆ ಹೇಳಿ ಜುಲೈ 2ರಂದು‌ ಸೌಮ್ಯಾ ಕೊಪ್ಪದ ತನ್ನ ಮನೆಯಿಂದ ತೆರಳಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ. ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್‌ ಸಾಗಹಾಕಲು ಮುಂದಾಗಿದ್ದ. ಇದಕ್ಕಾಗಿ ಇಬ್ಬರ ನಡುವೆ ಜಗಳವೇ ನಡೆದಿತ್ತು. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಬಂದ ಇಬ್ಬರ ನಡುವೆ ಮತ್ತೆ ವಾಗ್ವಾದ ಆರಂಭವಾಗಿತ್ತು. ಸಿಟ್ಟಿನಿಂದ ಸೃಜನ್‌ ಸೌಮ್ಯಾಳ ಮೇಲೆ   ಹಲ್ಲೆ ಮಾಡಿ ಕತ್ತು ಹಿಸುಕಿದ್ದ. ಪರಿಣಾಮವಾಗಿ ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಳು.

ನಂತರ ಸೌಮ್ಯಾಳ ಶವವನ್ನು ಮುಂಬಾಳು ಬಳಿ ಹೂತಿಟ್ಟು ಸೃಜನ್‌ ಮನೆಗೆ ತೆರಳಿದ್ದ. ಈ ನಡುವೆ ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಸೌಮ್ಯಾ ಪೋಷಕರು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದರು. ಅನುಮಾನ ಬಂದು ಸೃಜನ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಪೊಲೀಸರ ಎದುರು ಸೌಮ್ಯಾಳನ್ನು ಕೊಲೆ ಮಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ