October 5, 2024

ಅರಣ್ಯ ಭೂಮಿಯಲ್ಲಿ ಜೀವನೋಪಾಯಕ್ಕಾಗಿ ಮೂರು ಎಕರೆ ಒಳಗೆ ಸಾಗುವಳಿ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಭರವಸೆ ನೀಡಿದ್ದಾರೆ ಎಂದು ಕಸ್ತೂರಿ ರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್. ವಿಜಯ್‌ಕುಮಾರ್ ತಿಳಿಸಿದರು.

ಅವರು ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಸಮಿತಿಯ ನಿಯೋಗ ಜಿಲ್ಲೆಯ ಅರಣ್ಯ ಮತ್ತು ಕಂದಾಯ ಭೂಮಿಗಳ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಅರಣ್ಯ ಸಚಿವರನ್ನು ಬೆಂಗಳೂರಿನಲ್ಲಿ ಭೇಟಿಮಾಡಿ ಮನವಿ ಸಲ್ಲಿಸಿದ್ದು, ಸದನದಲ್ಲಿಯೂ ಈ ವಿಷಯ ಪ್ರಸ್ತಾಪಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದೆಂದು ಹೇಳಿದ್ದಾರೆ. ಅದಕ್ಕಾಗಿ ಸಚಿವರನ್ನು ಅಭಿನಂದಿಸುವುದಾಗಿ ಹೇಳಿದರು.

ಜಿಲ್ಲೆಯಾದ್ಯಂತ ಈಗಾಗಲೇ ಬಹುತೇಕ ಪ್ರದೇಶಗಳನ್ನು ವಿವಿಧ ರೀತಿಯ ಅರಣ್ಯ ಎಂದು ಘೋಷಿಸಿ ಲಕ್ಷಾಂತರ ಹೆಕ್ಟೇರ್ ಪ್ರದೇಶಗಳನ್ನು ಅರಣ್ಯೀಕರಣಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ವಾಸಿಸುವ ಜನರ ಸಮಸ್ಯೆಯ ವಾಸ್ತವತೆಯನ್ನು ಸರ್ಕಾರಕ್ಕೆ ಮರೆಮಾಚಿ ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಸಂಕಷ್ಟ ತಂದೊಡ್ಡಿದ್ದಾರೆಂದು ಆರೋಪಿಸಿದರು.

ಬದುಕಿನ ದಾರಿ ಕಾಣದೆ ಮುಗ್ದ ಜನ ಇದರಿಂದ ಸಮಸ್ಯೆಗೆ ಪರಿಹಾರ ದೊರೆಯದೆ ಕಂಗಾಲಾಗಿದ್ದಾರೆ ಎಂದು ದೂರಿದ ಅವರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನ, ಭದ್ರಾ ಅರಣ್ಯ, ರಾಜ್ಯ ಅರಣ್ಯ, ಮೀಸಲು ಅರಣ್ಯ, ಗ್ರಾಮ ಅರಣ್ಯ, ಕಂದಾಯ ಅರಣ್ಯ, ಡೀಮ್ಡ್ ಫಾರೆಸ್ಟ್, ಸೊಪ್ಪಿನ ಬೆಟ್ಟ, ರಕ್ಷಿತ ಅರಣ್ಯ ಎಂಬ ಹಲವು ಹೆಸರಿನಿಂದ ಶೇ. 50ಕ್ಕೂ ಹೆಚ್ಚು ಭೂಪ್ರದೇಶಗಳ ಅರಣ್ಯವನ್ನು ಜಿಲ್ಲೆ ಹೊಂದಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಲಕ್ಷಾಂತರ ಎಕರೆ ಭೂಮಿಯನ್ನು ಹುಲ್ಲುಬನ್ನಿ, ಸೊಪ್ಪಿನ ಬೆಟ್ಟ, ಕಂದಾಯ ಭೂಮಿಗಳನ್ನು ಸೇರಿದಂತೆ ಹೊಸ ಯೋಜನೆಗಳಿಗೆ ಮಾರ್ಪಡಿಸಿರುವುದರಿಂದ ಮಲೆನಾಡಿನ ಜನರ ಬದುಕು ಮತ್ತು ಸಂಸ್ಕೃತಿಯನ್ನು ಕಡೆಗಣಿಸಲಾಗುತ್ತಿದೆ. ಇದರಿಂದಾಗಿ ರೈತರು ತಮ್ಮ ಜೀವನೋಪಾಯಕ್ಕಾಗಿ 1 ರಿಂದ 3 ಎಕರೆ ಪ್ರದೇಶವನ್ನು ಸಾಗುವಳಿ ಮಾಡಿ ಸರ್ಕಾರದ ನಿರ್ದೇಶನದಂತೆ ಫಾರಂ ನಂ 50, 53, 57 ಅರ್ಜಿಗಳನ್ನು ಸಲ್ಲಿಸಿರುವ ಬಡವರ ನಂಬಿಕೆ ಮಣ್ಣುಪಾಲಾಗಿದೆ ಎಂದು ಟೀಕಿಸಿದರು.

ಸುಮಾರು 1 ಲಕ್ಷಕ್ಕೂ ಹೆಚ್ಚು ನಿವೇಶನ ರಹಿತರು 20×30 ಅಳತೆಯ ನಿವೇಶನಕ್ಕಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಿ ನಿರೀಕ್ಷೆಯಲ್ಲಿದ್ದಾರೆ. ಹತ್ತಾರು ವರ್ಷಗಳಿಂದ ಮನೆ ನಿರ್ಮಿಸಿಕೊಂಡಿರುವವರು 94 ಸಿ ಯಲ್ಲಿ ಅರ್ಜಿ ಸಲ್ಲಿಸಿ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.

ಆದರೆ ತಾಲೂಕು ಕಚೇರಿ ಮತ್ತು ಗ್ರಾಮ ಪಂಚಾಯಿತಿಗಳಿಂದ ನಿವೇಶನ ಮಂಜೂರು ಮಾಡಲು ಬಹುತೇಕ ಸರ್ವೆ ನಂಬರ್‌ಗಳ ಪ್ರದೇಶಗಳನ್ನು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಲ್ಪಟ್ಟಿರುವುದರಿಂದ ಸೆಕ್ಷನ್೪(1) ವ್ಯಾಪ್ತಿಯಲ್ಲಿ ಸೇರ್ಪಡೆಗೊಂಡಿದೆ ಎಂಬ ನೆಪ ಹೇಳಿ ಹತ್ತಾರು ವರ್ಷಗಳಿಂದ ನಿವೇಶನ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು.

ಈ ಎಲ್ಲಾ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಅತೀ ಶೀಘ್ರದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಬಡ ಜನರ ನಿವೇಶನ, ಮನೆ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಆಗಸ್ಟ್ 15 ರಂದು ಗಾಂಧಿ ಪ್ರತಿಮೆಯ ಮುಂದೆ ಎಲ್ಲಾ ರೈತರೊಂದಿಗೆ ಮೌನ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಕೆ.ಕೆ ರಘು, ಮುಖಂಡರುಗಳಾದ ಶಾಂತಕುಮಾರ್, ವೀರಭದ್ರಪ್ಪ, ಕುಮಾರ್, ಪೂರ್ಣೇಶ್ ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ