October 5, 2024

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ಶನಿವಾರವೂ (ಜುಲೈ 27) ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ, ಚಿಕ್ಕಮಗಳೂರು ಮತ್ತು ಕಳಸ ತಾಲೂಕುಗಳಲ್ಲಿ ಸಂಪೂರ್ಣ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ  ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಎಡಬಿಡದೇ ಮಳೆಯಾಗುತ್ತಿದ್ದು ಗುರುವಾರ ಮತ್ತು ಶುಕ್ರವಾರವೂ ಜಿಲ್ಲೆಯ ಆರು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು.

ಮಳೆ ಮತ್ತು ಗಾಳಿ ರಭಸವಾಗಿ ಮುಂದುವರೆದಿದ್ದು ಅನೇಕ ಕಡೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 27 ರಂದು ಶನಿವಾರ ಒಂದು ದಿನಕ್ಕೆ ಅನ್ವಯವಾಗುವಂತೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ