October 5, 2024

ಮಹಿಳಾ ಟಿ20 ಏಷ್ಯಾಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳಿಂದ ಬಾಂಗ್ಲಾದೇಶವನ್ನು ಮಣಿಸಿ ಫೈನಲ್ ತಲುಪಿದೆ.

ಶ್ರೀಲಂಕಾದಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಸೆಮಿಫೈನಲ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ  ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 80 ರನ್ ಪೇರಿಸಿತ್ತು. ಬಾಂಗ್ಲಾ ನೀಡಿದ 81 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡ 11 ಓವರ್ ಗಳ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 83 ರನ್ ಬಾರಿಸಿ ಸುಲಭದ ಗೆಲುವು ಪಡೆಯಿತು.

ಬಾಂಗ್ಲಾ ಪರ ನಿಗರ್ ಸುಲ್ತಾನಾ 32 ರನ್ ಬಾರಿಸಿ ಔಟಾದರೆ ಶೋರ್ನಾ ಅಖ್ತೆರ್ ಅಜೇಯ 19 ರನ್ ಸಿಡಿಸಿದ್ದಾರೆ. ಈ ಇಬ್ಬರು ಆಟಗಾರರನ್ನು ಬಿಟ್ಟರೆ ಮತ್ಯಾರು ಎರಡಂಕಿ ದಾಟಲಿಲ್ಲ. ಭಾರತ ಪರ ಬೌಲಿಂಗ್ ನಲ್ಲಿ ರೇಣುಕಾ ಸಿಂಗ್ ಹಾಗೂ ರಾಧಾ ಯಾದವ್ ತಲಾ 3 ವಿಕೆಟ್ ಪಡೆದರೆ ಪೂಜಾ ವಸ್ತ್ರಾಕರ್ ಮತ್ತು ದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದಿದ್ದಾರೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ಅಜೇಯ 55 ಮತ್ತು ಶೆಫಾಲಿ ವರ್ಮಾ ಅಜೇಯ 26 ರನ್ ಬಾರಿಸಿ ತಂಡಕ್ಕೆ 10 ವಿಕೆಟ್ ಗಳಿಂದ ಅಮೋಘ ಗೆಲುವು ತಂದುಕೊಟ್ಟರು.

ಏಷ್ಯಾಕಪ್ ಟೂರ್ನಿಯಲ್ಲಿ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಇಂದು ಮುಖಾಮುಖಿಯಾಗಲಿದ್ದು ಆ ಪಂದ್ಯದಲ್ಲಿ ಗೆದ್ದವರ ಜೊತೆ ಭಾರತ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ