October 5, 2024

ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದೆ. ಶೂಟಿಂಗ್ ನಲ್ಲಿ ಭಾರತಕ್ಕೆ ಕಂಚಿನ ಪದಕ ಒಲಿದಿದೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪಿಸ್ತೂಲ್​ ದೋಷದಿಂದ ಹಿನ್ನಡೆ ಅನುಭವಿಸಿದ್ದ ಶೂಟರ್​ ಮನು ಭಾಕರ್   ಇದೀಗ ಪ್ಯಾರಿಸ್   ಒಲಿಂಪಿಕ್ಸ್​ನಲ್ಲಿ   10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಫೈನಲ್​ ಪಂದ್ಯದಲ್ಲಿ 221.7 ಅಂಕ ಗಳಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಒಲಿದ ಮೊದಲ ಪದಕ. ಕೊರಿಯಾದ ಶೂಟರ್​ಗಳಾದ ಓಹ್ ಯೇ ಜಿನ್(243.2), ಕಿಮ್​ ಯೆಜಿ(241.3) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದರು.

ಇದೀಗ ಮನು ಭಾಕರ್​ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಶೂಟಿಂಗ್​ನಲ್ಲಿ ಭಾರತಕ್ಕೆ ಪದಕ ಗೆದ್ದ ಮೊದಲ ಮಹಿಳಾ ಶೂಟರ್​ ಎನ್ನುವ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಬರೆದರು.

ಹರಿಯಾಣದ 22 ವರ್ಷದ ಮನು ಭಾಕರ್​ ಕಳೆದ ಅರ್ಹತಾ ಸುತ್ತಿನಲ್ಲಿ ಒಟ್ಟು 580 ಅಂಕ ಕಲೆ ಹಾಕಿ 3ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದರು. ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ