October 5, 2024

ಸಕಲೇಶಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ರಸ್ತೆಯಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಮಣ್ಣಿನಡಿ ಹಲವು ವಾಹನಗಳು ಸಿಲುಕಿವೆ.

ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣಿನಡಿ ಹೂತುಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ವಾರವೂ ಸಕಲೇಶಪುರ ತಾಲೂಕಿನ ಇದೇ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿತ್ತು. ತಾತ್ಕಾಲಿಕವಾಗಿ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ರಸ್ತೆಯನ್ನು ಬಂದ್ ಮಾಡಲಾಗಿತ್ತು.

 ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಜರಿತ ಆಗಿರುವುದರಿಂದ ಮಂಗಳೂರು ಬೆಂಗಳೂರು ಸಂಚಾರಕ್ಕೆ ಮತ್ತೆ ವಿಘ್ನ ತಲೆದೋರಿದೆ.  ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಶಿರಾಡಿ ಘಾಟ್ ರಸ್ತೆ ಪ್ರಮುಖ ರಸ್ತೆಯಾಗಿದೆ. ಇತ್ತೀಚೆಗೆ ಆದ ಗುಡ್ಡ ಜರಿತದಿಂದ ಜನರು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಇದೀಗ ಮತ್ತೆ ಇದೇ ರಸ್ತೆಯಲ್ಲಿ ಹಾಸನ ಭಾಗದಲ್ಲಿ ಗುಡ್ಡ ಜರಿತವುಂಟಾಗಿದೆ. ಇದರಿಂದ ಮಂಗಳೂರು ಬೆಂಗಳೂರು ನಡುವೆ ರಸ್ತೆ ಸಂಚಾರಕ್ಕೆ ಅಡ್ಡಿ ಎದುರಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶಿರಾಡಿ ಘಾಟ್ ಆಚೆ ಹಾಸನ ಜಿಲ್ಲೆಯ ರಸ್ತೆಯಲ್ಲಿ ಗುಡ್ಡ ಜರಿತ ಉಂಟಾಗಿದೆ. ಆದುದರಿಂದ ಈ ರಸ್ತೆಯಲ್ಲಿ ಮಂಗಳೂರಿನಿಂದ ಸಂಚಾರವನ್ನು ಮಾಡುವವರು ಮುಂದಿನ ಸೂಚನೆಯವರೆಗೆ ಸಂಚಾರ ಮಾಡದಂತೆ ಕೋರಲಾಗಿದೆ. ಸಂಪಾಜೆ ಮುಖಾಂತರ ಹೋಗುವ ದಾರಿಯಲ್ಲಿ ಒಂದು ಗುಡ್ಡ ಜರಿತ ಆಗಿದ್ದು, ಅದನ್ನು ಕೂಡಲೇ ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್​ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ರಸ್ತೆಯನ್ನು ಕೂಡಲೇ ಬಂದ್ ಮಾಡದೇ ಇದ್ದಲ್ಲಿ ದೊಡ್ಡ ಪ್ರಮಾಣದಲ್ಲಿ ಅನಾಹುತವಾದರೆ ಅದಕ್ಕೆ ಸರ್ಕಾರ ನೇರ ಹೊಣೆಯಾಗಬೇಕಾಗುತ್ತದೆ. ಇದು ಪ್ರಕೃತಿ ವಿಕೋಪವಲ್ಲ ಗುತ್ತಿಗೆದಾರನ ಮಹಾಲೋಪ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ