October 5, 2024

ಜಾನುವಾರು ಕಟ್ಟಲು ಹೋದಾಗ ರೈತರೊಬ್ಬರು ಆಕಸ್ಮಿಕವಾಗಿ ಹೊಳೆಗೆ ಜಾರಿಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ನಡೆದಿದೆ.

ಬೈದುವಳ್ಳಿ ಗ್ರಾಮದ ಕೃಷಿಕ ಬಿ.ಎಲ್. ಗೋಪಾಲಗೌಡ(63 ವರ್ಷ) ಎಂಬುವವರು ಇಂದು ಶುಕ್ರವಾರ ಬೆಳಿಗ್ಗೆ ಸುಮಾರು 9-30 ರ ಸಮಯದಲ್ಲಿ ಜಾನುವಾರುಗಳನ್ನು ಕಟ್ಟಲು ಹೋದಾಗ ಆಕಸ್ಮಿಕವಾಗಿ ತುಂಬಿಹರಿಯುತ್ತಿದ್ದ ಹೇಮಾವತಿ ಉಪನದಿಗೆ ಜಾರಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ನೀರು ರಭಸವಾಗಿ ಹರಿಯುತ್ತಿದ್ದರಿಂದ ಗೋಪಾಲ್ ಮೇಲೇಳಲಾಗದೇ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಅವಿವಾಹಿತರಾಗಿದ್ದ ಗೋಪಾಲ್ ಗೌಡ ಅವರು ಕೃಷಿಕರಾಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಅವರಿಗಾಗಿ ಶೋಧ ನಡೆಸಿದ್ದು ಪತ್ತೆಯಾಗಿಲ್ಲ. ಸ್ಥಳಕ್ಕೆ ಗೋಣಿಬೀಡು ಪೊಲೀಸ್, ಅಗ್ನಿಶಾಮಕ ದಳ, ಮುಳುಗು ತಜ್ಞರು ಆಗಮಿಸಿ ಶವಕ್ಕಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಸಂಜೆವರೆಗೂ ಗೋಪಾಲ್ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

ಅಗ್ನಿಶಾಮಕ ದಳದೊಂದಿಗೆ, ಸಮಾಜಸೇವಕರಾದ ಫಿಶ್ ಮೋಣು, ಆರೀಫ್ ಬಣಕಲ್, ಅಬ್ದುಲ್ ರಹಿಮಾನ್, ಆಶೀಕ್, ಸುಲೈಮಾನ್, ರಹಿಮಾನ್ ಅವರ ತಂಡದವರು ನದಿಯಲ್ಲಿ ಶವಕ್ಕಾಗಿ ತೀವ್ರ ಹುಡುಕಾಟ ನಡೆಸಿದ್ದು, ಸಂಜೆವರೆಗೆ ಹುಡುಕಾಟ ನಡೆಸಿದರು ಯಾವುದೇ ಕುರುಹು ಪತ್ತೆಯಾಗಿಲ್ಲ.

ಸ್ಥಳಕ್ಕೆ ಮೂಡಿಗೆರೆ ತಹಸೀಲ್ದಾರ್ ರಾಜಶೇಖರ್ ಮೂರ್ತಿಯವರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಗೋಣಿಬೀಡು ಎಸ್.ಐ. ಹರ್ಷಗೌಡ ತಮ್ಮ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಬೈದುವಳ್ಳಿ ಸೇತುವೆ ಬಳಿ ಬೆಳಿಗ್ಗೆಯಿಂದ ಸುತ್ತಮುತ್ತಲ ನೂರಾರು ಜನರು ಜಮಾವಣೆಯಾಗಿ ಕಾರ್ಯಾಚರಣೆ ವೀಕ್ಷಿಸುತ್ತಿದ್ದಾರೆ.

 

ಇಂದು ಜಿಲ್ಲೆಯಲ್ಲಿ ಅತಿವೃಷ್ಟಿ ಪ್ರದೇಶ ವೀಕ್ಷಣೆಗೆ ಬಂದಿರುವ ಮಾಜಿ ಉಪಮುಖ್ಯಮಂತ್ರಿ ಡಾ. ಆಶ್ವತ್ಥನಾರಾಯಣ ಅವರ ನೇತೃತ್ವದ ಬಿ.ಜೆ.ಪಿ. ನಿಯೋಗವೂ ಘಟನಾ  ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ