October 5, 2024

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯು ನಾಗರಿಕ ದಂಗೆಯಾಗಿ ಬದಲಾದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಪ್ರಧಾನಿ ಶೇಖ್‌ ಹಸೀನಾ ಭಾರತಕ್ಕೆ ಪಲಾಯನಗೈದಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿರುವ ಶೇಖ್‌ ಹಸೀನಾ, ಶೀಘ್ರದಲ್ಲಿಯೇ ಲಂಡನ್‌ಗೆ ಹಾರಲಿದ್ದಾರೆ ಎಂದು ತಿಳಿದುಬಂದಿದೆ. ತಾತ್ಕಾಲಿಕವಾಗಿ ಭಾರತದಲ್ಲಿ ಆಶ್ರಯ ಪಡೆಯುವ ಅವರು ಬಳಿಕ ಲಂಡನ್‌ಗೆ ತೆರಳಿ, ಅಲ್ಲಿಯೇ ಕೆಲ ಕಾಲ ನೆಲೆಸಲಿದ್ದಾರೆ ಎನ್ನಲಾಗುತ್ತಿದೆ.

ಹಸೀನಾ ರಾಜೀನಾಮೆ ನೀಡಿ, ಪಲಾಯನಗೈದ ಬಳಿಕ ಪ್ರತಿಭಟನಾಕಾರರು   ಅವರ ನಿವಾಸಕ್ಕೆ ನುಗ್ಗಿದ್ದಾರೆ. ಶೇಖ್‌ ಹಸೀನಾ ನಿವಾಸದಲ್ಲಿ ಪ್ರತಿಭಟನಾಕಾರರು ಬಿರಿಯಾನಿ ಸೇರಿ ಎಲ್ಲಾ ಆಹಾರವನ್ನು ಸೇವಿಸಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಕದ್ದಿದ್ದಾರೆ. ಶೇಖ್‌ ಹಸೀನಾ ಮನೆಯಲ್ಲಿ ಪ್ರತಿಭಟನಾಕಾರರ ಹುಚ್ಚಾಟದ ವಿಡಿಯೊಗಳು ಈಗ ವೈರಲ್‌ ಆಗಿವೆ.

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿಚಾರಕ್ಕಾಗಿ ಕಳೆದ ಅನೇಕ ದಿನಗಳಿಂದ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ವಿದ್ಯಾರ್ಥಿ ಸಂಘಟನೆಗಳಿಗೆ ಅಲ್ಲಿನ ವಿರೋಧ ಪಕ್ಷವೂ ಬೆಂಬಲ ನೀಡಿದ ಪರಿಣಾಮ ಪ್ರತಿಭಟನೆ ವ್ಯಾಪಕತೆಯನ್ನು ಪಡೆದು ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಈಗ ಅಲ್ಲಿನ ಸೇನೆಯು ದೇಶವನ್ನು ಹಿಡಿತಕ್ಕೆ ಪಡೆದುಕೊಂಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ