October 5, 2024

ಕಾರವಾರದ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾರೆ.

ಕಾರವಾರ ಗೋವಾ ಸಂಪರ್ಕ ಮಾಡುವ ಕಾರವಾರ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ ಮಂಗಳವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಕುಸಿದು ಬಿದ್ದಿದೆ. ಇದು ಹಳೆಯ ಸೇತುವೆಯಾಗಿದ್ದು, ಸೇತುವೆಯ ಮೇಲೆ ವಾಹನ ಸಂಚಾರ ಚಾಲ್ತಿಯಲ್ಲಿತ್ತು. ಪಕ್ಕದಲ್ಲಿ ಇನ್ನೊಂದು ಸೇತುವೆ ನಿರ್ಮಾಣ ಮಾಡಲಾಗಿದೆ.

ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ. ತಕ್ಷಣ ಮೀನುಗಾರರು ಹಾಗೂ ಪೋಲಿಸರು ಲಾರಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.

ಗಾಯಗೊಂಡಿರುವ ಕೇರಳ ಮೂಲದ ಚಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಘಟನೆ ಸಂಭವಿಸುವ ವೇಳೆ ಬೈಕ್ ಹಾಗೂ ಕಾರು ಕೂಡ ಇದೇ ಸೇತುವೆ ಮೇಲೆ ಸಂಚಾರ ಮಾಡುತ್ತಿತ್ತು ಅವರ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

ಈ ಘಟನೆಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ. ರಾಜ್ಯದ ಎಲ್ಲಾ ಸೇತುವೆಗಳ ಗುಣಮಟ್ಟ ಖಾತ್ರಿಪಡಿಸುವ ಬಗ್ಗೆ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ