October 5, 2024

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ನಮ್ಮ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅದನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಅವರು ಬುಧವಾರ ಮೂಡಿಗೆರೆ ಪಟ್ಟಣದ ತಾ.ಪಂ. ಆವರಣದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಏರ್ಪಡಿಸಿದ್ದ 36 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸಕ್ತ ಕಾಲಘಟ್ಟದಲ್ಲಿ ಟೈಲರ್ ವೃತ್ತಿ ಮಾಡುವುದರಿಂದ ಆರ್ಥಿಕವಾಗಿ ಲಾಭ ಗಳಿಸಬಹುದಾಗಿದೆ. ಅಲ್ಲದೇ ಮಹಿಳೆಯರು ಎಲ್ಲಾ ರಂಗದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕೆ ಕುಟುಂಬ ಹಾಗೂ ಸಮಾಜ ಬೆಂಬಲ ವ್ಯಕ್ತಪಡಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ದೇವರಾಜ ಅರಸು, ಕರ್ನಾಟಕ ವೀರಶೈವ, ಒಕ್ಕಲಿಗ, ವಿಶ್ವಕರ್ಮ, ನಿಜಶರಣ ಅಂಬಿಗರ ಚೌಡಯ್ಯ, ಮಡಿವಾಳ, ಮರಾಠ, ಸವಿತಾ ಸಮಾಜ, ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸ್ವ ಉದ್ಯೋಗಕ್ಕೆ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ. ಫಲಾನುಭವಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಎಲ್ಲಾ ಮಹಿಳೆಯರು ಸ್ವ ಉದ್ಯೋಗ ರೂಪಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಪ.ಪಂ. ಸದಸ್ಯ ಎಚ್.ಪಿ.ರಮೇಶ್, ತಾ.ಪಂ. ಇಒ ದಯಾವತಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ರಾಕೇಶ್, ಸಹಾಯಕ ಅಭಿವೃದ್ಧಿ ಅಧಿಕಾರಿ ಸುಮಂಗಳ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ