October 5, 2024

ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋಗಿದ್ದ 19ನೇ ಗೇಟ್‌ ನಲ್ಲಿ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದ್ದು ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ. ತಜ್ಞ ಕನ್ನಯ್ಯ ನಾಯ್ಡು ತಂಡ ಮೂರು ದಿನಗಳಿಂದ ಸ್ಟಾಪ್ ಲಾಗ್​ಗೆ ಅಳವಡಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತ್ತು.

ನಾಲ್ಕು ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ ಡ್ಯಾಂನಿಂದ ಹೊರ ಹೋಗುತ್ತಿದ್ದ ನೀರು ಬಂದ್ ಆಗಿದೆ. ಸದ್ಯ ಜಲಾಶಲಯದ ಎಲ್ಲ 33 ಗೇಟ್‌ಗಳನ್ನು ಮುಚ್ಚಲಾಗಿದೆ ಎಂದು ಟಿಬಿ ಡ್ಯಾಂ ಮಂಡಳಿ ತಿಳಿಸಿದೆ. ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ 70 ಟಿಎಂಸಿಯಷ್ಟು ನೀರು ಉಳಿಸಲು ಸಾಧ್ಯವಾಗಿದೆ. ಇನ್ನು ಆ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇದುವರೆಗೆ ಪೋಲಾದ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸ ಹೊಂದಲಾಗಿದೆ.

70 ವರ್ಷದ ನಂತರ ತುಂಗಾ ಭದ್ರಾ ಡ್ಯಾಂನಲ್ಲಿ ಇದೇ ಮೊದಲ ಬಾರಿಗೆ ಗೇಟ್ ಒಡೆದಿದ್ದು 30ಕ್ಕೂ ಹೆಚ್ಚು ಟಿಎಂಸಿ ನೀರು ಪೋಲಾಗಿತ್ತು. ನೀರಿನ ರಭಸಕ್ಕೆ ಗೇಟ್ ಕೊಚ್ಚಿ ಹೋಗಿತ್ತು. ತಜ್ಞರ ಪ್ರಕಾರ 50 ವರ್ಷಕ್ಕೊಮ್ಮೆ ಗೇಟ್ ಬದಲಿಸಬೇಕು. ಇನ್ಮುಂದೆ ತಜ್ಞರು ಹೇಳಿದಂತೆ, ಜಲಾಶಯ ನಿರ್ವಹಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಣೆಕಟ್ಟಿಗೆ ಭೇಟಿ ನೀಡಿದ ಬಳಿಕ ಹೇಳಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ