October 5, 2024

ಚಿಕ್ಕಮಗಳೂರು ಉಪವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾಗಿ ಶ್ರೀಮತಿ ಕೆ. ಸೀತಮ್ಮ ಅವರನ್ನು ನೇಮಕ ಮಾಡಲಾಗಿದೆ.

ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳ ಆದೇಶದ ಮೇರೆಗೆ ಮುಂದಿನ 3 ವರ್ಷಗಳ ಅವಧಿಗೆ ಶ್ರೀಮತಿ ಸೀತಮ್ಮ ಅವರನ್ನು ಚಿಕ್ಕಮಗಳೂರು ಉಪವಿಭಾಗದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯೆಯನ್ನಾಗಿ ನೇಮಕ ಮಾಡಲಾಗಿದೆ ಎಂದು ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಸಹಾಯಕ ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀಮತಿ ಸೀತಮ್ಮ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿದ್ದರು., ಮೂಡಿಗೆರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಯಾಗಿ ಕಳೆದ ವರ್ಷವಷ್ಟೇ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

ಮೂಡಿಗೆರೆ ಮೂಲದ ಶ್ರೀಮತಿ ಸೀತಮ್ಮ ತಮ್ಮ ನಿವೃತ್ತಿಯ ನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಅವರನ್ನು ಪರಿಶಿಷ್ಟ ಜಾತಿ ಮತ್ತು ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಅವರು ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ