October 5, 2024

ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಹೇಳಿದರು.

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್‌ಐಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿ ತಿರುಗೇಟು

ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ಮೈಸೂರಿನ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಅಂತ ಹೇಳುತ್ತಿದ್ದಾರೆ. ಇಂತಹ ಬಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡೋಕೆ ನೂರು ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ   ತಿರುಗೇಟು ನೀಡಿದ್ದಾರೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಅಗತ್ಯ ಬಿದ್ರೆ ಕುಮಾರಸ್ವಾಮಿ ಬಂಧನ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಕಿಡಿಕಾರಿರುವ ಅವರು, ನನಗೆ ಯಾವುದೇ ಭಯ ಇಲ್ಲ, ನನ್ನ ಬಂಧನ ಮಾಡೋಕೆ ನೂರು ಸಿದ್ದರಾಮಯ್ಯ ಬರಬೇಕು ಎಂದು ಹೇಳಿದರು.

 

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ