October 5, 2024

ವಿಶ್ವವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಆನೆಗಳನ್ನು ಸ್ವಾಗತಿಸುವ ಗಜಪಯಣಕ್ಕೆ ಬುಧವಾರ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಲಾಗಿದ್ದು, ಒಂಬತ್ತು ಆನೆಗಳು ಅರಮನೆ ನಗರಿಯತ್ತ ಹೆಜ್ಜೆ ಹಾಕಿದವು.

ಮೈಸೂರು ದಸರಾಕ್ಕೆ ಆಗಮಿಸುವ ಅಭಿಮನ್ಯು ನೇತೃತ್ವದ ಗಜ ಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತವನ್ನು ನೀಡಲಾಯಿತು.

ಪ್ರತಿ ವರ್ಷ ಗಜಪಯಣದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕುಮ್ಕಿ ಆನೆಗಳು ದಸರಾ ಉತ್ಸವದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ತರಬೇತಿಗಾಗಿ ಮೈಸೂರಿಗೆ ಹೋಗುತ್ತವೆ.

ಈ ವರ್ಷ ಮೊದಲ ಬ್ಯಾಚ್‌ನಲ್ಲಿ ಒಂಬತ್ತು ಆನೆಗಳು, ಅಭಿಮನ್ಯು, ಧನಂಜಯ, ಗೋಪಿ, ಭೀಮಾ, ರೋಹಿತ್, ಕಂಜನ್, ಹೊಸ ಆನೆ ಏಕಲವ್ಯ ಹಾಗೂ ಹೆಣ್ಣು ಆನೆಗಳಾದ ವರಲಕ್ಷ್ಮಿ ಮತ್ತು ಲಕ್ಷ್ಮಿಯನ್ನು ಇಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅರಣ್ಯ ಇಲಾಖೆ ಹಾಗೂ ದಸರಾ ಸಮಿತಿಯಿಂದ ಬರ ಮಾಡಿಕೊಳ್ಳಲಾಯಿತು.

ಈ ಬಾರಿಯ ದಸರ ಗಜಪಡೆಗೆ ಹೊಸದಾಗಿ ಸೇರ್ಪಡೆಯಾಗಿರುವ ಏಕಲವ್ಯ (ಮೂಡಿಗೆರೆ ಭೈರ) ಆನೆಯು ಎಲ್ಲರ ಆಕರ್ಷಣೆಯ ಕೇಂದ್ರವಾಗಿದೆ. 2022ರಲ್ಲಿ ಮೂಡಿಗೆರೆ ಸಮೀಪದ ಊರುಬಗೆ ಸಮೀಪ ಸೆರೆಹಿಡಿಯಲಾಗಿದ್ದ ಮೂಡಿಗೆರೆ ಭೈರ ಆನೆ ಕೇವಲ ಒಂದೂವರೆ ವರ್ಷಕ್ಕಾಗಲೇ ಮೈಸೂರು ದಸರಾ ತಂಡಕ್ಕೆ ಆಯ್ಕೆಯಾಗಿರುವುದು ವಿಶೇಷವಾಗಿದೆ. ತನ್ನ ರಾಜಗಾಂಭೀರ್ಯ ನಡೆಯಿಂದ ಅದು ಎಲ್ಲರ ಗಮನ ಸೆಳೆಯುತ್ತಿದೆ.

ದಸರಾ ಕಾರ್ಯಾಧ್ಯಕ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ ಅವರು ಆನೆಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಗಜಪಯಣಕ್ಕೆ ಚಾಲನೆ ನೀಡಿದರು.

ಗಜಪಯಣ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯಲಿದ್ದು, ಜನಸಾಮಾನ್ಯರ ದಸರಾ ಆಗಲಿದೆ ಎಂದು ಸಚಿವರು ಹೇಳಿದರು.

ನಾಗರಹೊಳೆ ಅರಣ್ಯದಲ್ಲಿ ವಾಸಿಸುವ ಬುಡಕಟ್ಟು ಸಮುದಾಯದವರು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಂಸದ ಸುನೀಲ್ ಬೋಸ್, ಶಾಸಕರಾದ ಜಿ.ಡಿ.ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಖಾತರಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್  ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ