October 5, 2024

ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯೊಳಗೆ ಮನೆಗೆ ಹೋಗಲು ವಾಹನ ಸಿಗದೇ ಒಂಟಿಯಾಗಿರುವ ಯಾವುದೇ ಮಹಿಳೆ ಪೊಲೀಸ್ ಸಹಾಯವಾಣಿ ಸಂಖ್ಯೆಗಳನ್ನು (1091 ಮತ್ತು 7837018555) ಸಂಪರ್ಕಿಸಿ ವಾಹನಕ್ಕಾಗಿ ವಿನಂತಿಸಬಹುದಾದ ಉಚಿತ ಪ್ರಯಾಣ ಯೋಜನೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ. ಅವರು 24×7 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಯಂತ್ರಣ ಕೊಠಡಿಯ ವಾಹನ ಅಥವಾ ಹತ್ತಿರದ ಪಿಸಿಆರ್ ವಾಹನ/ಎಸ್‌ಎಚ್‌ಒ ವಾಹನವು ಆಕೆಯನ್ನು ಸುರಕ್ಷಿತವಾಗಿ ಆಕೆಯ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತದೆ. ಇದನ್ನು ಉಚಿತವಾಗಿ ಮಾಡಲಾಗುವುದು. ನಿಮಗೆ ತಿಳಿದಿರುವ ಎಲ್ಲರಿಗೂ ಈ ಸಂದೇಶವನ್ನು ಹರಡಿ ಎಂಬ ರೀತಿಯ ಸಂದೇಶವೊಂದು ಈಗ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಅಗಿದೆ.

ಈ ಸಂದೇಶದಲ್ಲಿ ಮುಂದುವರಿದು ಪುರುಷರು, ನಿಮ್ಮ ಹೆಂಡತಿ, ಹೆಣ್ಣುಮಕ್ಕಳು, ಸಹೋದರಿಯರು, ತಾಯಂದಿರು, ಸ್ನೇಹಿತರು ಮತ್ತು ನಿಮಗೆ ತಿಳಿದಿರುವ ಎಲ್ಲಾ ಮಹಿಳೆಯರಿಗೆ ಸಂಖ್ಯೆಯನ್ನು ಕಳುಹಿಸಿ. ಎಲ್ಲಾ ಪುರುಷರು ದಯವಿಟ್ಟು ನಿಮಗೆ ತಿಳಿದಿರುವ ಎಲ್ಲಾ ಮಹಿಳೆಯರೊಂದಿಗೆ ಹಂಚಿಕೊಳ್ಳಿ.
ತುರ್ತು ಸಂದರ್ಭಗಳಲ್ಲಿ ಮಹಿಳೆಯರು ಖಾಲಿ ಸಂದೇಶ ಅಥವಾ ಮಿಸ್ಡ್ ಕಾಲ್ ನೀಡಬಹುದು.. ಇದರಿಂದ ಪೊಲೀಸರು ನಿಮ್ಮ ಸ್ಥಳವನ್ನು ಪತ್ತೆ ಹಚ್ಚಬಹುದು ಮತ್ತು ನಿಮಗೆ ಸಹಾಯ ಮಾಡಬಹುದು, ಇದು  ಭಾರತದಾದ್ಯಂತ ಅನ್ವಯಿಸುತ್ತದೆ ಎಂದೆಲ್ಲ ಸಂದೇಶದಲ್ಲಿ ಹೇಳಲಾಗಿದೆ.

ಇದೀಗ ಈ ಸಂದೇಶದ ಬಗ್ಗೆ ಪೊಲೀಸ್ ಇಲಾಖೆ ಸ್ವಷ್ಪನೆ ನೀಡಿದ್ದು, ಇದೊಂದು ಸುಳ್ಳು ಸಂದೇಶ, ಈ ರೀತಿಯ ಯಾವುದೇ ಪ್ರಕಟಣೆಯನ್ನು ಪೊಲೀಸ್ ಇಲಾಖೆ ಹೊರಡಿಸಿಲ್ಲ ಮತ್ತು ಇಂತಹ ಯಾವುದೇ ವ್ಯವಸ್ಥೆ ಜಾರಿಯಲ್ಲಿ ಇಲ್ಲ. ಇದನ್ನು ಸಾರ್ವಜನಿಕರು ನಂಬಿ ಬೇರೆಯವರಿಗೆ ಫಾರ್ವರ್ಡ್ ಮಾಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಅಲ್ಲದೇ ಯಾವುದೇ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆಮಾಡಬಹುದಾಗಿದೆ ಎಂದು ತಿಳಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ