October 5, 2024

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸತ್ತಿಗನಹಳ್ಳಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಶಿಕ್ಷಕರ ಕೊರತೆ ನೀಗಿಸುವಂತೆ ಆಗ್ರಹಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗುರುವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ಜಮಾಯಿಸಿದ ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರು ಮತ್ತು ಗ್ರಾಮಸ್ಥರು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಂತ್ ಹೊಸಕೆರೆ ; ಸತ್ತಿಗನಹಳ್ಳಿ ಶಾಲೆಗೆ ಶಿಕ್ಷಕರ ಕೊರತೆಯಾಗಿದ್ದು, ಇಲ್ಲಿನ ವಿದ್ಯಾರ್ಥಿಗಳು ಶಿಕ್ಷಕರ ಕೊರತೆಯಿಂದ ಬೇರೆಡೆಗೆ ವರ್ಗಾವಣೆ ಪತ್ರ ತೆಗೆದುಕೊಂಡು ಹೋಗುತ್ತಿದ್ದಾರೆ. ಇಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರನ್ನು ಬೇರೆಡೆಗೆ ವರ್ಗಾವಣೆ ಮತ್ತು ನಿಯೋಜನೆ ಮಾಡಲಾಗಿದೆ. ಇಲ್ಲಿ ಈಗ ಓರ್ವ ಗುತ್ತಿಗೆ ಆದಾರದ ಶಿಕ್ಷಕಿ ಹೊರತು ಪಡಿಸಿ ಬೇರಾವ ಶಿಕ್ಷಕರೂ ಇಲ್ಲ. ಈ ಹಿಂದೆ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿ ಶ್ರೀಮತಿ ಮಾಲತಿ ಅವರನ್ನು ಕಡೂರು ತಾಲ್ಲೂಕಿಗೆ ನಿಯೋಜನೆ ಮಾಡಿ ಕಳುಹಿಸಲಾಗಿದೆ. ಆ ಶಿಕ್ಷಕಿಯ ನಿಯೋಜನೆಯನ್ನು ರದ್ದುಗೊಳಿಸಿ ತಕ್ಷಣ ಸತ್ತಿಗನಹಳ್ಳಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ವಿಷಯ ತಿಳಿದು ಶಾಲೆಗೆ ಆಗಮಿಸಿದ ಬಿ.ಇ.ಓ. ಹೇಮಂತ್‍ರಾಜ್ ಅವರಿಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಸ್ವೀಕರಿಸಿದ ಬಿ.ಇ.ಓ. ಅವರು ತಕ್ಷಣ ಓರ್ವ ಶಿಕ್ಷಕರನ್ನು ಶಾಲೆಗೆ ನಿಯೋಜನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಾದ ಅರುಣ್, ಜಯಕುಮಾರ್, ಮಧುಶ್ರೀ, ಧರ್ಮೇಶ್, ಮಹೇಶ್, ನಿರಂಜನ್, ಗ್ರಾ.ಪಂ. ಸದಸ್ಯ ನಚಿಕೇತ್, ಪಿ.ಡಿ.ಓ. ಇಂತೇಶ್, ಗ್ರಾಮಸ್ಥರಾದ ಬಸವರಾಜು, ಪ್ರಕಾಶ್, ಜಯಪಾಲ್, ಅಶೋಕ್, ರಮೇಶ್, ಪ್ರೇಮ್ ಕುಮಾರ್, ರತನ್, ಶೋಧನ್ ಮುಂತಾದವರು ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ