October 5, 2024

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಮುಗಿದು ಒಂದು ದಶಕವೇ ಕಳೆದರೂ ಜನರಿಗೆ ನೀರು ಕುಡಿಯುವ ಸೌಭಾಗ್ಯ ಸಿಕ್ಕಿಲ್ಲ.

ಗ್ರಾಮಕ್ಕೆ ಈಗ್ಗೆ ಸುಮಾರು 10 ವರ್ಷಗಳ ಹಿಂದೆಯೇ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ (NRDWP) ಅಡಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣವಾಗಿದೆ. ಹಾಗೆಯೇ ಹೊಳೆಯ ಪಕ್ಕದಲ್ಲಿ ನೀರಿನ ಬಾವಿಯೂ ನಿರ್ಮಾಣವಾಗಿದೆ. ಇತ್ತೀಚೆಗೆ ಪೈಪ್ ಲೈನ್ ಸಹ ಅಳವಡಿಸಲಾಗಿದೆ. ಆದರೆ ಯೋಜನೆಗೆ ವಿದ್ಯುತ್ ಸಂಪರ್ಕ ನೀಡದೇ ಇರುವುದರಿಂದ ಇದುವರೆಗೂ ಜನರಿಗೆ ನೀರು ಸರಬರಾಜು ಮಾಡಲು ಸಾಧ್ಯವಾಗಿಲ್ಲ.

ಈ ಬಗ್ಗೆ ಗ್ರಾಮಸ್ಥರು ಅನೇಕ ಬಾರಿ ಸಂಬಂಧಿಸಿದ ಇಲಾಖೆಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನ ಆಗಿಲ್ಲ. ಹತ್ತು ವರ್ಷದಿಂದ ಸರ್ಕಾರದ ಹಣ ವ್ಯರ್ಥವಾಗಿದ್ದು, ಹತ್ತು ವರ್ಷದ ಹಿಂದೆ ನಿರ್ಮಾಣ ಮಾಡಿದ ನೀರಿನ ಟ್ಯಾಂಕ್ ಯಾವುದೇ ನಿರ್ವಹಣೆ ಇಲ್ಲದೇ ಶಿಥಿಲಾವಸ್ಥೆಗೆ ತಲುಪಿದೆ.

ಆದಷ್ಟು ಬೇಗ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಿಬೇಕು. ಈಗಾಗಲೇ ಶಿಥಿಲವಾಗಿರುವ ಟ್ಯಾಂಕ್ ಬದಲು ಸುಸಜ್ಜಿತ ಟ್ಯಾಂಕ್ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇಲ್ಲದೇ ಇದ್ದರೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ