October 5, 2024

ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಸಾವಿನ ಸರಣಿ ಮುಂದುವರಿದಿದೆ. ಶುಕ್ರವಾರ ಬೆಳ್ಳಂಬೆಳ್ಳಗೆ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಮನೆಯ ಸಮೀಪವೇ ಮಹಿಳೆ ಮೇಲೆ ದಾಳಿ ನಡೆಸಿ ಕಾಡಾನೆ ಕೊಂದು ಹಾಕಿದೆ. ಚನ್ನಯ್ಯನಕೋಟೆ ನಿವಾಸಿ ಕಾತಯಿ (72) ಮೃತ ದುರ್ದೈವಿ. ಇಂದು ಮುಂಜಾನೆ ಮನೆಯಿಂದ ಹೊರ ಬರುತ್ತಿದ್ದ ವೇಳೆ ಕಾಡಾನೆಯೂ ದಾಳಿ ಮಾಡಿದೆ. ವೃದ್ಧೆಯಾಗಿರುವುದರಿಂದ ಆನೆಯಿಂದ ತಪ್ಪಿಸಿಕೊಳ್ಳಲು ಆಗದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ, ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ‌ ಸಂಕೇತ್ ಪೂವಯ್ಯ ಭೇಟಿ ನೀಡಿ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ