October 5, 2024

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅನಧಿಕೃತವಾಗಿ ವಾಹನ ರ್ಯಾಲಿ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯ ಬೈರಾಪುರ-ಹೊಸಕೆರೆ ಪ್ರದೇಶದ 9 ಗುಡ್ಡಗಳನ್ನು ಆವೃತ ಪ್ರದೇಶದಲ್ಲಿ 4 ಚಕ್ರ ವಾಹನ ರಾಲಿ ನಡೆದ ಬಗ್ಗೆ ವ್ಯಾಪಕ ಟೀಕೆಗಳು ಎದುರಾಗಿತ್ತು.

ಪರಿಸರ ಸೂಕ್ಷ್ಮ ಆನೆ ಕಾರಿಡಾರ್ ಯೋಜನೆ ವ್ಯಾಪ್ತಿ ಪ್ರದೇಶದಲ್ಲಿ 52 ವಾಹನಗಳು ರ್‍ಯಾಲಿಯಲ್ಲಿ ಭಾಗವಹಿಸಿದ್ದು, ಸಿಸಿಎಫ್ ಶ್ರೇಣಿಯ ಅಧಿಕಾರಿಯಿಂದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಉಲ್ಲೇಖಿಸಿ ಸಚಿವರು ಈ ಸೂಚನೆ ನೀಡಿದ್ದಾರೆ.

ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಕ್ರಮ ತೆಗೆದುಕೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

ಅಕ್ರಮವಾಗಿ ಏರ್ಪಡಿಸಿದ್ದ ರ್ಯಾಲಿ , ಇಲಾಖೆ ವೈಫಲ್ಯದ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿದ್ದಂತೆ, ಉಪ ಅರಣ್ಯ  ಸಂರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೆಲ ವಾಹನ ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ