October 5, 2024

ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೀಮತಿ ಗೀತಾ ರಂಜನ್ ಅಜಿತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ರಮೇಶ್ ಹೊಸ್ಕೆರೆ ಅವರು ಮೂಡಿಗೆರೆ ಶಾಸಕರ ಗೃಹ ಕಚೇರಿಯಲ್ಲಿ  ಮಾಜಿ ಸಚಿವೆ ಶ್ರೀಮತಿ ಮೋಟಮ್ಮ  ಹಾಗೂ ಶಾಸಕಿ ಶ್ರೀಮತಿ ನಯನಾ ಮೋಟಮ್ಮ ಅವರನ್ನು ಸನ್ಮಾನಿಸಿ, ಗೌರವಿಸಿದರು.

ಅಧ್ಯಕ್ಷ ಸ್ಥಾನವನ್ನು ಗೆಲ್ಲುವುದರಲ್ಲಿ ಮಾರ್ಗದರ್ಶನ ಮತ್ತು ಸಹಕಾರ ನೀಡಿದ್ದಕ್ಕಾಗಿ ಶ್ರೀಮತಿ ಮೋಟಮ್ಮ ಹಾಗೂ ಶ್ರೀಮತಿ ನಯನಾ ಮೋಟಮ್ಮ ಅವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಗಿದೆ ಎಂದು ಪ.ಪಂ. ಅಧ್ಯಕ್ಷೆ ಗೀತಾ ಅವರು ತಿಳಿಸಿದ್ದಾರೆ.

ಇದೇ ವೇಳೆ ಗೆಲುವು ಸಾಧಿಸಿರುವ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ತಿಳಿಸಿ, ಶುಭ ಹಾರೈಸಿದ ಶಾಸಕಿ ನಯನಾ ಮೋಟಮ್ಮ ಮೂಡಿಗೆರೆ ಪಟ್ಟಣದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ಆಗಬೇಕು, ಅದಕ್ಕೆ ನನ್ನ ಸಹಕಾರ ಸದಾ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಂಜನ್ ಅಜಿತ್ ಕುಮಾರ್,  ಕೆ. ವೆಂಕಟೇಶ್,  ನಿಶಾಂತ್ ಪಟೇಲ್, ಸಂಪತ್ ಪಟ್ಟದೂರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ