October 5, 2024

ಮಲಯಾಳಂ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ, ಶೋಷಣೆ ಅಧ್ಯಯನಕ್ಕೆ ಸಮಿತಿ ರಚಿಸುವಂತೆ FIRE (ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ) ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಹಿರಿಯ ಲೇಖಕಿ ಡಾ. ವಿಜಯಾ, ಸಾಮಾಜಿಕ ಕಾರ್ಯಕರ್ತ, ನಟ ಚೇತನ್  ಅಹಿಂಸಾ ನೇತೃತ್ವದಲ್ಲಿನ ಫೈರ್ ನಿಯೋಗ ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು.

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆ ಅಧ್ಯಯನ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿಸಮಿತಿ ರಚಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಈ ಸಂಬಂಧ 130ಕ್ಕೂ ಅಧಿಕ ಮಂದಿ ಸಹಿ ಮಾಡಿರುವ ಪತ್ರವನ್ನು ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹಿರಿಯ ಲೇಖಕಿ ಡಾ. ವಿಜಯಾ, ಚೇತನ್, ನಟಿಯರಾದ ಶೃತಿ ಹರಿಹರನ್, ನೀತು ಈ ನಿಯೋಗದಲ್ಲಿದ್ದರು.

ಸ್ಯಾಂಡಲ್ವುಡ್ ನಲ್ಲಿ ಕೆಲಸ ಮಾಡುವ ಮಹಿಳೆಯರ ಸಮಸ್ಯೆಗಳ ಕುರಿತಂತೆ ಹೋರಾಡಲು ಈ ಹಿಂದೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ರಚಿಸಲಾಗಿತ್ತು. 2017ರಲ್ಲಿ ರಚಿಸಲಾಗಿದ್ದ ಈ ಸಂಸ್ಥೆಯಲ್ಲಿ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಸೇರಿದ್ದರು. ಈ ಸಂಸ್ಥೆ ಇದೀಗ ಮತ್ತೆ ಈ ಕಮಿಟಿ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟಕ್ಕೆ ನಿಂತಿದೆ.

ಮನವಿ ಪತ್ರಕ್ಕೆ FIRE ಅಧ್ಯಕ್ಷೆ ನಿರ್ದೇಶಕಿ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟ ಸುದೀಪ್, ಕಿಶೋರ್, ವಿನಯ್ ರಾಜ್‌ಕುಮಾರ್, ನಿರ್ದೇಶಕ ಪವನ್ ಒಡೆಯರ್‌, ನಟಿಯರಾದ ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧಾ ಶ್ರೀನಾಥ್, ನಿಶ್ವಿಕಾ ನಾಯ್ಡು, ಸಂಗೀತಾ ಭಟ್ , ನೀತು ಶೆಟ್ಟಿ ಸೇರಿದಂತೆ ಕಿರುತೆರೆ ನಟ ನಟಿಯರು ಸೇರಿ ಒಟ್ಟು 153 ಮಂದಿ ಸಹಿ ಹಾಕಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ