October 5, 2024

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗಾಗಿ ಜನರ ತೆರಿಗೆ ಸೇರಿದಂತೆ ನಾನಾ ರೀತಿಯ ವಾಮಾ ಮಾರ್ಗದ ಮೂಲಕ ಜನರಿಂದ ಹಣ ವಸೂಲಿಗೆ ಇಳಿದಿರುವುದು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಇದೀಗ ಗಣೇಶೋತ್ಸವ ಹಬ್ಬದ ಹೆಸರಿನಲ್ಲಿ ಹಗಲು ದರೋಡೆಗೆ ಇಳಿದಂತಿದೆ. ಹಿಂದೂಗಳ ಧಾರ್ಮಿಕ ಆಚರಣೆಗೆ ಕಾಂಗ್ರೇಸ್ ಸರ್ಕಾರ ಉದ್ದೇಶಪೂರ್ವಕವಾಗಿ ಅಡ್ಡಗಾಲು ಹಾಕುತ್ತಿದ್ದು, ಗಣೇಶೋತ್ಸವನ್ನೆಕ ಹತ್ತಾರು ಕರಾರುಗಳನ್ನು ಜಾರಿಗೆ ತಂದಿದೆ ಎಂದು ಬಿಜೆಪಿ ಮೂಡಿಗೆರೆ ತಾಲ್ಲೂಕು ವಕ್ತಾರ ವಿನಯ್ ಹಳೆಕೋಟೆ ದೂರಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ಈ ಹಿಂದೆ ಗಣೇಶ ಹಬ್ಬ ಆಚರಣೆ ಮಾಡಲು ಸರಳ ಹಾಗೂ ಸಡಿಲವಾದ ನಿಯಮಗಳನ್ನು ರೂಪಿಸಲಾಗಿತ್ತು. ಆದರೆ ಈಗ ರಾಜ್ಯ ಸರಕಾರ ಗಣೇಶೋತ್ಸವ ಹೆಸರಿನಲ್ಲಿ ಹಗಲು ದರೋಡೆ ನಡೆಸಲು ಇಲ್ಲಸಲ್ಲದ ನಿಯಮಗಳನ್ನು ರೂಪಿಸಿದ್ದರಿಂದ ರಾಜ್ಯಾಧ್ಯಂತ ಗಣಪತಿ ಸೇವಾ ಸಮಿತಿಗಳು ಈ ಬಾರಿ ಗಣಪತಿ ಪ್ರತಿಷ್ಠಾಪಿಸಿ ಹೋಮ ಹವನ, ಪೂಜೆ, ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿ ನಂತರ ವಿಸರ್ಜನೆ ನಡೆಸಲು ಬಾರಿ ತೊಂದರೆ ಎದುರಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಸಾಮಾನ್ಯವಾಗಿ ಸ್ಥಳೀಯ ನಗರ, ಪಟ್ಟಣ, ಗ್ರಾಮ ಹಾಗೂ ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆದು ಪ್ರದೇಶದಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಆದರೆ ಈ ಬಾರಿ ಆಯೋಜಕರ ಆಧಾರ್ ಕಾರ್ಡ್ ಸಹಿತ 100 ರೂಗಳ ಬಾಂಡ್ ಪೇಪರ್ ಪಡೆದು ಗಣೇಶೋತ್ಸವ ನಡೆಸುವ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಹೊಸ ನಿಯಮ ಜಾರಿ ಮಾಡಲಾಗಿದೆ. ಅಲ್ಲದೇ ಮೆಸ್ಕಾಂ, ಪೊಲೀಸ್, ಲೋಕೋಪಯೋಗಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸ್ಥಳೀಯ ಪಂಚಾಯಿತಿಗಳಿಂದ ಪರವಾನಗಿ ಪಡೆಯಲು ನಿಯಮ ರೂಪಿಸಲಾಗಿದೆ. ಈ ಎಲ್ಲಾ ಕಾರ್ಯ ನಡೆಸಲು ಗಣಪತಿ ಸೇವಾ ಸಮತಿಗಳಿಗೆ ಕನಿಷ್ಟ ನಾಲ್ಕೈದು ದಿನ ಸಮಯ ವ್ಯರ್ಥವಾಗುತ್ತಿದೆ ಎಂದಿದ್ದಾರೆ.

ಇಷ್ಟು ವರ್ಷ ಇಲ್ಲದ ನಿಯಮ ಈಗ ಏಕಾಏಕಿ ಜಾರಿ ಮಾಡಿರುವುದು ಗಮನಿಸಿದರೆ ಹಿಂದೂಗಳ ಧಾರ್ಮಿಕ ಹಬ್ಬಗಳ ಮೇಲೆ ರಾಜ್ಯ ಸರಕಾರ ಸವಾರಿ ಮಾಡುತ್ತಿದೆ. ಅಲ್ಲದೇ ಗಣೇಶೋತ್ಸವಕ್ಕೆ ಎಲ್ಲಾ ಗಣಪತಿ ಸೇವಾ ಸಮಿತಿಗಳಿಂದ 100 ರೂ ಗಳ ಬಾಂಡ್ ಮೂಲಕ ರಾಜ್ಯ ಸರಕಾರ ಹಗಲು ದರೋಡೆಗೆ ಇಳಿದಿರುವುದು ಎದ್ದು ಕಾಣುತ್ತಿದೆ. ರಾಜ್ಯ ಸರಕಾರ ಹೊರಡಿಸಿರುವ ಈ ಹೊಸ ನಿಯಮವನ್ನು ಕೂಡಲೇ ರದ್ದುಗೊಳಿಸಿ ಹಿಂದೆ ಇದ್ದ ನಿಯಮದಂತೆ ಗಣೇಶೋತ್ಸವ ನಡೆಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ