October 5, 2024

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ ಪರಿಣಾಮ ಸೃಷ್ಟಿಯಾದ ಗಲಭೆಯಲ್ಲಿ ಅನೇಕ ಅಂಗಡಿಗಳು ಭಸ್ಮವಾಗಿದ್ದು, ವಾಹನಗಳು ಬೆಂಕಿಗಾಹುತಿಯಾಗಿವೆ. ನಾಗಮಂಗಲ ಅಕ್ಷರಶಃ ಹೊತ್ತಿ ಉರಿದಿದೆ. ಜನ ಭಯಭೀತರಾಗಿದ್ದಾರೆ.

ಬುಧವಾರ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟ್ಟಣದ ದರ್ಗಾ ಒಂದರ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಮುಸ್ಲೀಂ  ಯುವಕರ ತಂಡವೊಂದು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಅದು ಅತಿರೇಕಕ್ಕೆ ತಿರುಗಿ ನಗರದಲ್ಲಿ ಕಲ್ಲು ತೂರಾಟ, ಅಂಗಡಿ ವಾಹನಗಳಿಗೆ ಬೆಂಕಿ ಹಚ್ಚುವ ದುಷ್ಕೃತ್ಯ ನಡೆಸಲಾಗಿದೆ.  ಕಿಡಿಗೇಡಿಗಳು ಮಾರಕಾಸ್ತ್ರಗಳನ್ನು ಹಿಡಿದು ಓಡಾಡಿದ್ದಾರೆ, ಪೆಟ್ರೋಲ್ ಬಾಂಬ್ ಗಳನ್ನು ಅಂಗಡಿಗಳ ಮೇಲೆ ಎಸೆದು ಅಟ್ಟಹಾಸ ಮೇರೆದಿದ್ದಾರೆ. ಕಲ್ಲು ತೂರಾಟದಲ್ಲಿ ಪೊಲೀಸರು ಸೇರಿದಂತೆ ಹಲವು ಗಾಯಗೊಂಡಿದ್ದಾರೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಅಂಗಡಿಗಳು ಮತ್ತು ಅನೇಕ ವಾಹನಗಳು ಸುಟ್ಟು ಕರಕಲಾಗಿವೆ. ನಾಗಮಂಗಲ ಪಟ್ಟಣದ ಜನರು ಭಯಭೀತರಾಗಿದ್ದಾರೆ. ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 54 ಜನರನ್ನು ಬಂಧಿಸಲಾಗಿದೆ.

ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ಅಮಾಯಕ ಜನರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಸುಟ್ಟು ಕರಕಲಾಗಿರುವ ತಮ್ಮ ಅಂಗಡಿಗಳನ್ನು ಕಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ